ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಮಾಲಕನಿಗೆ 25,000 ರೂ. ದಂಡ

ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಮಾಲಕನಿಗೆ 25,000 ರೂ. ದಂಡ

ಮಂಗಳೂರು: ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದ ಮೇರೆಗೆ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ.

ರಾ.ಹೆ. 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3.30ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕೂಟರ್‌ನಲ್ಲಿ ತೆರಳುತ್ತಿದ್ದ. ಆ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಢಿಕ್ಕಿ ಹೊಡೆದಿದ್ದು, ಇದರಿಂದ ಎರಡೂ ವಾಹನದಲ್ಲಿದ್ದವರು ಗಾಯಗೊಂಡಿದ್ದರು.

ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಎಸ್ಸೈ ರೋಸಮ್ಮ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್‌ಸಿ ಎಂಟನೇ ನ್ಯಾಯಾಲಯದ ನ್ಯಾಯಾಧೀಶ ಫವಾಝ್ ಪಿ.ಎ. ಅವರು ಅಪ್ರಾಪ್ತನಿಗೆ ಚಲಾಯಿಸಲು ಸ್ಕೂಟರ್ ನೀಡಿದ ಮಾಲಕ ಅಬ್ದುಲ್ ಹಮೀದ್‌ನಿಗೆ 25,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article