ಶ್ರೀ ಕ್ಷೇತ್ರ ನೆಲ್ಲಿತೀರ್ಥ ಸೋಮನಾಥೇಶ್ವರ ಗುಹಾಲಯ ಶೀರೂರು ಶ್ರೀ ಭೇಟಿ: ಜ.3 ರಂದು ನಡೆಯುವ ವಿಶೇಷ ಹುಣ್ಣಿಮೆ ತೀರ್ಥ ಸ್ನಾನ
Wednesday, December 31, 2025
ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಶ್ರೀ ಕ್ಷೇತ್ರ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯಕ್ಕೆ ಭಾವೀ ಪರ್ಯಾಯ ಪೀಠಾಧೀಶ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವೀ ಸಂಚಾರದಲ್ಲಿರುವ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಜ.3 ರಂದು ಭೇಟಿ ನೀಡಿ ವಿಶೇಷ ಹುಣ್ಣಿಮೆ ತೀರ್ಥ ಸ್ನಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜ.3 ರಂದು ಬೆಳಗ್ಗೆ 7.30ಕ್ಕೆ ಪ್ರಾರಂಭವಾಗುವ ಕಾರ್ಯಕ್ರಮಕ್ಕೆ ದೇವಾಲಯದ ವ್ಯವಸ್ಥಾಪನಾ ಸಮಿತಿಯು, ಭಕ್ತರು ಮತ್ತು ಸ್ಥಳೀಯ ನಾಗರಿಕರು ಸ್ವಾಮೀಜಿಯವರನ್ನು ಸ್ವಾಗತಿಸಲು ಮತ್ತು ಅವರ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದೆ. ಶ್ರೀ ದೇವರ ವರ್ಷಾವಧಿ ಮಹೋತ್ಸವವು ಜ.2 ರಿಂದ 7 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.