ಮೆಸ್ಕಾಂನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನ
Sunday, December 7, 2025
ಮಂಗಳೂರು: ಮೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ಮೆಸ್ಕಾಂ, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದಲ್ಲಿರುವ ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿನಲ್ಲಿ ಬೇರೆಲ್ಲೂ ಇಲ್ಲ ನಮ್ಮ ಸಂವಿಧಾನ ಶಿಲ್ಪಿ ಹಾಕಿಕೊಟ್ಟ ಮಾರ್ಗದರ್ಶನ ಮತ್ತು ಆದರ್ಶಗಳನ್ನು ಮೆಸ್ಕಾಂ ಸಿಬ್ಬಂದಿಗಳಾದ ನಾವು, ಅನುಸರಿಸಿ ದೈನಂದಿನ ಕರ್ತವ್ಯ ನಿರ್ವಹಿಸಿದಾಗ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಆರ್ಥಿಕ ಸಲಹೆಗಾರ ದೇವರಾಜ್ ಮತ್ತು ಪ್ರಧಾನ ವ್ಯವಸ್ಥಾಪಕ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು, ಅಂಬೇಡ್ಕರ್ ಅವರ ಸಾಧನೆಗಳನ್ನು ಉಲ್ಲೇಖಿಸಿ ಅವರ ಬದುಕು ಅನುಕರಣೀಯ ಎಂದರು.
ಮೆಸ್ಕಾಂ ಸಾರ್ವಜನಿಕ ಸಂಪರ್ಕ ಅಧಿಕಾರಿ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.