ಡಿ.8 ರಂದು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆ: ಬೃಹತ್ ಮೆರವಣಿಗೆ ಹಾಗೂ ಬಹಿರಂಗ ಸಭೆ
ಅವರು ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಡಿ.8 ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಜನರು ಸಾವಿರಾರು ಸಂಖ್ಯೆಯಲ್ಲಿ ಮೆರವಣಿಗೆ ನಡೆಸಿ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಬಿಜೆಪಿ ಮತ್ತು ರಾಜ್ಯವನ್ನಾಳುವ ಕಾಂಗ್ರೆಸ್ ಜಿಲ್ಲೆಯ ಜನರ ಬದುಕಿನ ಅಭಿವೃದ್ಧಿಯನ್ನು ಕಡೆಗಣಿಸುತ್ತಿದೆ. ಜನರ ನೈಜ ಸಮಸ್ಯೆಗಳ ಪರಿಹಾರದ ಬದಲಾಗಿ ಉಳ್ಳವರ ಹಿತ ಕಾಯುವ ಕೆಲಸ ಮಾಡುತ್ತಿದೆ ಎಂದರು.
ಜಿಲ್ಲೆಯ ಆರೋಗ್ಯ, ಶಿಕ್ಷಣ ವ್ಯವಸ್ಥೆ ಸಂಪೂರ್ಣ ವ್ಯಾಪಾರಿಕರಣಗೊಂಡಿದೆ ಆರ್ಥಿಕವಾಗಿ ಸಬಲರಾಗಿದ್ದವರಿಗೆ ಮಾತ್ರ ಶಿಕ್ಷಣ ಮತ್ತು ಆರೋಗ್ಯ ಸೇವೆ ಸಿಗುತ್ತಿದೆ. ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗಿದೆ. ಖಾಸಗಿಯವರನ್ನು ನಿಯಂತ್ರಿಸಲಾಗದೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಮಾಫಿಯಾ ಆಗಿ ಬದಲಾಗಿ ಇಡೀ ಜಿಲ್ಲೆಯ ರಾಜಕಾರಣವನ್ನು ನಿಯಂತ್ರಿಸುತ್ತಿದೆ ಎಂದು ದೂರಿದರು.
ಜಿಲ್ಲೆಯ ಜನರು ನಿರುದ್ಯೋಗ, ಕೈಗಾರಿಕೆಗಳ ಪರಿಸರ ಮಾಲಿನ್ಯ, ಮರಳು ಮತ್ತು ಕೆಂಪು ಕಲ್ಲು, ಮನೆ ನಿವೇಶನ, ರಾಷ್ಟೀಯ ಹೆದ್ದಾರಿ ಸಹಿತ ರಸ್ತೆ ಸಮಸ್ಯೆಗಳು ಸೇರಿದಂತೆ ಅನೇಕ ಸಮಸ್ಯೆಗಳಿಂದ ತತ್ತರಿಸಿ ಹೋಗಿದ್ದರೂ ಜನತೆಯ ಜೊತೆಗೆ ನಿಂತು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕಿದ್ದ ಬಿಜೆಪಿ ಮತ್ತು ಕಾಂಗ್ರೆಸ್ಸಿನ ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ಮರೆತು ಪೈಪೋಟಿಗೆ ಬಿದ್ದಂತೆ ಜನರನ್ನು ಸಮೂಹ ಸನ್ನಿಗೊಳಪಡಿಸುವ ಕ್ರಿಯೆಯಲ್ಲಿ ತೊಡಗಿದ್ದಾರೆ ಜಿಲ್ಲೆಯ ಜನರ ಬದುಕಿಗೆ ಬೇಕಾಗಿರುವ ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ ಸಮಸ್ಯೆಗಳ ಪರಿಹಾರಕ್ಕೆ ಕನಿಷ್ಠ ಪ್ರಯತ್ನವನ್ನು ಮಾಡದ ಬಿಜೆಪಿ, ಕಾಂಗ್ರೆಸ್ ರಾಜಕೀಯಕ್ಕೆ ಪರ್ಯಾಯವಾಗಿ ಸಿಪಿಐ(ಎಂ) ಪಕ್ಷ ಜನರ ಬದುಕನ್ನು ಉತ್ತಮಪಡಿಸುವ ಸಲುವಾಗಿ ಈ ಹೋರಾಟವನ್ನು ಹಮ್ಮಿಕೊಂಡಿದ್ದು ಈ ಹೋರಾಟದ ಯಶಸ್ವಿಗಾಗಿ ಸಿಪಿಐ(ಎಂ) ಕಾರ್ಯಕರ್ತರು ಕಳೆದ ಒಂದು ತಿಂಗಳಿಂದ ಮನೆ ಮನೆ ಪ್ರಚಾರ ಕೈಗೊಂಡಿದ್ದು ಜನರಿಂದ ವ್ಯಾಪಕ ಸಕಾರಾತ್ಮಕ ಬೆಂಬಲ ವ್ಯಕ್ತವಾಗುತ್ತಿದ್ದು ಸಿಪಿಐ(ಎಂ) ಈ ಹೋರಾಟದಲ್ಲಿ ಎತ್ತಿಕೊಂಡಿರುವ ಬೇಡಿಕೆಗಳು ಎಲ್ಲಾ ಜನ ಸಮುದಾಯದ ಜನ ಬಾಧಿಸುತ್ತಿರುವ ಸಮಸ್ಯೆಗಳಾಗಿದ್ದು ಈ ಹಿನ್ನೆಲೆಯಲ್ಲಿ ಡಿ.8 ರಂದು ಹೋರಾಟ ಯಶಸ್ವಿಯಾಗಲಿದೆ ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದದ್ಯಂತ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಿಪಿಐ(ಎಂ) ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು, ಸಿಪಿಐ(ಎಂ) ದ.ಕ ಜಿಲ್ಲಾ ಸಮಿತಿ ಸದಸ್ಯ ಸಂತೋಷ್ ಬಜಾಲ್, ಸಿಪಿಐ(ಎಂ) ನಗರ ಉತ್ತರ ಸಮಿತಿ ಸದಸ್ಯ ರವಿಚಂದ್ರ ಕೊಂಚಾಡಿ, ಸಿಪಿಐ(ಎಂ) ನಗರ ದಕ್ಷಿಣ ಸಮಿತಿ ಸದಸ್ಯ ತಯ್ಯೂಬ್ ಬೆಂಗರೆ, ಸಿಪಿಐ(ಎಂ) ಯುವ ಮುಖಂಡ ರಿಜ್ವಾನ್ ಬೆಂಗರೆ ಉಪಸ್ಥಿತರಿದ್ದರು.