ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕಾಗಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ
CITU ದ.ಕ.ಜಿಲ್ಲಾ ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ಮಾತನಾಡಿ, 2001ರಲ್ಲಿ ಜಾರಿಗೆ ಬಂದತಹ ಬಿಸಿಯೂಟ ಯೋಜನೆಗೆ 2014ರಲ್ಲಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರವು ನಿರಂತರವಾಗಿ ತನ್ನ ಪಾಲನ್ನು ಕಡಿತಗೊಳಿಸುತ್ತಾ ಬಂದಿದೆ. ದೇಶಾದ್ಯಂತ 26ಕ್ಕೂ ಮಿಕ್ಕಿದ ಬಿಸಿಯೂಟ ನೌಕರರು,ಸರಕಾರದ ಆದೇಶದಲ್ಲಿ 4 ಗಂಟೆಯ ಕೆಲಸವೆಂದು ಹೇಳಿದ್ದರೂ 8 ಗಂಟೆಯಷ್ಟು ದುಡಿಯುತ್ತಿದ್ದರೂ ಸರಕಾರಗಳು ಮಾತ್ರ ದಿವ್ಯಮೌನ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಿಸಿಯೂಟ ನೌಕರರ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷರಾದ ಪದ್ಮಾವತಿ ಶೆಟ್ಟಿಯವರು, ಮುಂಬರುವ ಬಜೆಟ್ ನಲ್ಲಿ ಕನಿಷ್ಠ ವೇತನ ಜಾರಿಯಾಗಬೇಕು,ಯಾವುದೇ ಕಾರಣಕ್ಕೂ ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಬಾರದು, ILC ಶಿಫಾರಸ್ಸಿನಂತೆ ಖಾಯಂ ಉದ್ಯೋಗಸ್ಥರಂತೆ ಪರಿಗಣಿಸಿ ಎಲ್ಲಾ ಶಾಸನಬದ್ದ ಸವಲತ್ತುಗಳನ್ನು ನೀಡಬೇಕು* ಮುಂತಾದ ಬೇಡಿಕೆಗಳ ಬಗ್ಗೆ ಗಮನ ಸೆಳೆದರು.
ಹೋರಾಟವನ್ನು ಬೆಂಬಲಿಸಿ ಬೀಡಿ ಕಾರ್ಮಿಕರ ಸಂಘಟನೆಯ ಜಿಲ್ಲಾ ನಾಯಕರಾದ ಜಯಂತ ನಾಯಕ್, ಸಮುದಾಯ ಸಂಘಟನೆಯ ಹಿರಿಯ ನಾಯಕರಾದ ವಾಸುದೇವ ಉಚ್ಚಿಲ್ ರವರು ಮಾತನಾಡಿದರು.
ಪ್ರತಿಭಟನೆಯಲ್ಲಿ CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರು, ಸುಂದರ ಕುಂಪಲ, ಪ್ರಮೋದಿನಿ,ಬಿಸಿಯೂಟ ನೌಕರರ ಸಂಘಟನೆಯ ಜಿಲ್ಲಾ ನಾಯಕರಾದ ರೇಖಾಲತಾ,ಬಬಿತಾ,ಲೀಲಾವತಿ, ಮೋಹಿನಿ,ಶೋಭಾ,ಸುಶೀಲಾ, ಚಿತ್ರಾವತಿ,ಸಬೀನಾ ಮುಂತಾದವರು ಬಾಗವಹಿದ್ದರು.

