ಮಾಜಿ ಕಾರ್ಪೊರೇಟರ್ ರೂಪಶ್ರೀ ಪೂಜಾರಿ ಅವರಿಗೆ ನ್ಯಾಯಾಲಯದಲ್ಲಿ ಜಯ: ಸುಳ್ಳು ದೌರ್ಜನ್ಯ ಪ್ರಕರಣದಿಂದ ದೋಷಮುಕ್ತ

ಮಾಜಿ ಕಾರ್ಪೊರೇಟರ್ ರೂಪಶ್ರೀ ಪೂಜಾರಿ ಅವರಿಗೆ ನ್ಯಾಯಾಲಯದಲ್ಲಿ ಜಯ: ಸುಳ್ಳು ದೌರ್ಜನ್ಯ ಪ್ರಕರಣದಿಂದ ದೋಷಮುಕ್ತ


ಮಂಗಳೂರು: 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ವಿಶೇಷ ನ್ಯಾಯಾಲಯ) ವಾರ್ಡ್ ಸಂಖ್ಯೆ 51ರ ಮಾಜಿ ಕಾರ್ಪೊರೇಟರ್ ರೂಪಶ್ರೀ ಪೂಜಾರಿ ಅವರನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾಗಿದ್ದ ಸುಳ್ಳು ಪ್ರಕರಣದಿಂದ ಖುಲಾಸೆಗೊಳಿಸಿದೆ.

ಪ್ರಕರಣದ ಹಿನ್ನೆಲೆ:

ದಿನಾಂಕ 23.11.2023 ರಂದು ನೂಜಿಯಲ್ಲಿ ಖಾಸಗಿ ರಸ್ತೆಯೊಂದಕ್ಕೆ ಸಾರ್ವಜನಿಕ ನಿಧಿಯನ್ನು (PWD Funds) ಅಕ್ರಮವಾಗಿ ಬಳಸಲಾಗುತ್ತಿದೆ ಎಂಬ ದೂರಿನ ಮೇರೆಗೆ, ಮಾಜಿ ಕಾರ್ಪೊರೇಟರ್ ರೂಪಶ್ರೀ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಅಮಲ ಜ್ಯೋತಿ ಮತ್ತು ಅವರ ಪತಿ ರಾಜೇಶ್ ಆರ್. ಅವರು ಕಾರ್ಪೊರೇಟರ್ ವಿರುದ್ಧ ಸುಳ್ಳು ಜಾತಿ ನಿಂದನೆ ದೂರು ದಾಖಲಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article