ಎಸ್‌ಸಿಡಿಸಿಸಿ ಬ್ಯಾಂಕ್ ನೌಕರ ವರ್ಗದಿಂದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ
ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಮೊದಲ ಬಾರಿ ನೀಡಿದ ಪ್ರತಿಷ್ಠಿತ ‘ಸಹಕಾರಿ ಸಾರ್ವಭೌಮ’ ಪ್ರಶಸ್ತಿಯನ್ನು ನವೆಂಬರ್-28ರಂದು ಬಹರೈನ್‌ನಲ್ಲಿ ಹಾಗೂ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾದ ಪ್ರತಿಷ್ಠಿತ ‘ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ’ಯನ್ನು ನವೆಂಬರ್ 27 ರಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಪ್ರದಾನ ಮಾಡಲಾಗಿತ್ತು.
ಅಭಿಮಾನ ಪೂರ್ವಕ ಗೌರವ:
ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಈ ಎರಡು ಪ್ರತಿಷ್ಠಿತ ಪ್ರಶಸ್ತಿಗಳು ಸಹಕಾರಿ ರಂಗದ ಜನಪರ ಸೇವೆಗಳಿಗೆ ಒಲಿದು ಬಂದಿದೆ. ಎಸ್‌ಸಿಡಿಸಿಸಿ ಬ್ಯಾಂಕ್ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಕುಟುಂಬಗಳ ಆರ್ಥಿಕ ಶಕ್ತಿಯಾಗಿದ್ದ ಇವರು ಎಸ್‌ಸಿಡಿಸಿಸಿ ಬ್ಯಾಂಕ್‌ನ್ನು ಕಳೆದ 31 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸಿ ಈ ಬ್ಯಾಂಕ್‌ನ್ನು ರಾಷ್ಟ್ರೀಕೃತ ಬ್ಯಾಂಕುಗಳ ಸ್ಥಾನಮಾನಕ್ಕೇರಿಸಿದ್ದಾರೆ. ಇವರ ವಿಶಿಷ್ಟ ಕಾರ್ಯ ವೈಖರಿಯಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳೊಂದಿಗೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಹಾಗಾಗಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ದೊರೆತ ಈ ಎರಡು ಪ್ರಶಸ್ತಿಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್ ನೌಕರರು ಸಂತೋಷದಿಂದ ತಮ್ಮ ಅಧ್ಯಕ್ಷರನ್ನು ಅಭಿಮಾನ ಪೂರ್ವಕವಾಗಿ ಅಭಿನಂದಿಸಿದ್ದಾರೆ.
ವಿವಿಧ ವಿಭಾಗಗಳ ಮೂಲಕ ಅಭಿನಂದನೆ:
ಎಸ್‌ಸಿಡಿಸಿಸಿ ಬ್ಯಾಂಕಿನ ವಸೂಲಾತಿ ವಿಭಾಗದ ಉಪ ಮಹಾಪ್ರಬಂಧಕರಾದ ನಿತ್ಯಾನಂದ ಶೇರಿಗಾರ್, ಲೆಕ್ಕಪತ್ರ ವಿಭಾಗದ ಉಪ ಮಹಾಪ್ರಬಂಧಕೆ ಶರ್ಮಿಳಾ ಎಸ್. ಭಟ್, ಯೋಜನೆ ಶಾಖೆ ನಿಯಂತ್ರಣ ವಿಭಾಗದ ಉಪ ಮಹಾಪ್ರಬಂಧಕೆ ವಿದ್ಯಾ ಕಾರ್ನಾಡ್, ಸಹಾಯಕ ಮಹಾಪ್ರಬಂಧಕ ರಾಜೇಶ್ ಶೆಟ್ಟಿ, ಕೊಡಿಯಾಲ್ ಬೈಲ್ ಶಾಖೆಯ
ಉಪ ಮಹಾಪ್ರಬಂಧಕೆ ಜ್ಯೋತಿ ಬಾಳಿಗ, ಆಡಳಿತ ವಿಭಾಗದ ಸಹಾಯಕ ಮಹಾಪ್ರಬಂಧಕೆ ಸಹನಾ ಬಿ. ಶೆಟ್ಟಿ, ಸಾಲ ವಿಭಾಗದ ಸಹಾಯಕ ಮಹಾಪ್ರಬಂಧಕೆ ಹೇಮಲತಾ ಕೆ., ಸುಜಾತ ಭಟ್, ಕಂಪ್ಯೂಟರ್ ವಿಭಾಗದ ವ್ಯವಸ್ಥಾಪಕ ಸುನಿಲ್ ಕುಮಾರ್ ಮತ್ತಿತರರು ವಿಭಾಗದ ಎಲ್ಲಾ ಸಿಬ್ಬಂದಿಗಳು ಡಾ. ಎಂ.ಎನ್.ರಾ ಜೇಂದ್ರಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
ಇದೇ ಸಂದರ್ಭದಲ್ಲಿ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಹಾಗೂ ಸಿಬ್ಬಂದಿಗಳು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿದರು.
ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ. ವಾದಿರಾಜ ಶೆಟ್ಟಿ, ಎಸ್.ಎನ್. ಮನ್ಮಥ, ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್. ಮತ್ತಿತರರು ಉಪಸ್ಥಿತರಿದ್ದರು.