ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ: ಧನಲಕ್ಷ್ಮಿ ಪೂಜಾರಿ ಅವರಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸನ್ಮಾನ
ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಧನಲಕ್ಷ್ಮಿ ಪೂಜಾರಿ ಅವರನ್ನು ಸನ್ಮಾನಿಸಿ, ಮಾತನಾಡಿದರು.
ಧನಲಕ್ಷ್ಮಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ 1 ಲಕ್ಷ:
ಧನಲಕ್ಷ್ಮಿ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಶಾಲು, ಫಲಪುಷ್ಪ, ಹಾರ, ಬೆಳ್ಳಿ ದೀಪ ಸ್ಮರಣಿಕೆಯೊಂದಿಗೆ 1 ಲಕ್ಷದ ಚೆಕ್‌ನ್ನು ನೀಡಿ ಗೌರವಿಸಿದರು.
ಸನ್ಮಾನಕ್ಕೆ ಉತ್ತರಿಸಿದ ಧನಲಕ್ಷ್ಮಿ ಪೂಜಾರಿ ಅವರು ತನ್ನ ಕ್ರೀಡಾ ಸಾಧನೆಯನ್ನು ಗುರುತಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ನನ್ನನ್ನು ಸನ್ಮಾನಿಸಿರುವುದು ತುಂಬಾ ಸಂತೋಷ ತಂದಿದೆ. ಅವರ ಅಭಿಮಾನಕ್ಕೆ ನಾನು ಚಿರಋಣಿ ಎಂದರು.
ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್(ರಿ) ಅಧ್ಯಕ್ಷ ರಾಜ್ ಕುಮಾರ್ ಅವರನ್ನು ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಸನ್ಮಾನಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಂ. ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪನಿಂಬಂಧಕ ರಮೇಶ್ ಹೆಚ್.ಎನ್., ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಮೇಘರಾಜ್ ಆರ್. ಜೈನ್, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಉದ್ಯಮಿ ಜಯಪ್ರಕಾಶ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು.
ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ವಂದಿಸಿದರು.
