ರಥಬೀದಿ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನಾಚರಣೆ
Thursday, December 4, 2025
ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ರಿಬ್ಬನ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಸರಕಾರಿ ಲೇಡಿಗೋಶನ್ ಮಂಗಳೂರು ಇಲ್ಲಿನ ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗದ ಹಿರಿಯ ತಜ್ಞೆ ಡಾ. ಸುಂದರಿ ಭಾಗವಹಿಸಿ, ಏಡ್ಸ್ ರೋಗದ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿ, ಯುವ ಜನತೆ ಈ ರೋಗದ ಬಗ್ಗೆ ಜಾಗೃತರಾಗಿರುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕ-2ರ ಯೋಜನಾಧಿಕಾರಿ ಶೋಭಾಮಣಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಘಟಕ-3ರ ಯೋಜನಾಧಿಕಾರಿ ಡಾ. ಲೋಕೇಶನಾಥ್ ಬಿ., ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿ ಸದಸ್ಯರು ಮತ್ತು ಇತರ ಬೋಧಕರು ಉಪಸ್ಥಿತರಿದ್ದರು.
ದ್ವಿತೀಯ ಬಿ.ಬಿ.ಎ ವಿದ್ಯಾರ್ಥಿನಿ ಪರೀಕ್ಷಿತ ಕೆ.ಎ ನಿರೂಪಿಸಿದರು. ಯೋಗಿತಾ, ದ್ವಿತೀಯ ಬಿ.ಬಿ.ಎ ಸ್ವಾಗತಿಸಿ, ಪ್ರಥಮ ಬಿ.ಕಾಂ.ನ ದೀಪ್ತಿ ವಂದಿಸಿದರು.
ಈ ಸಂದರ್ಭದಲ್ಲಿ ಪೋಸ್ಟರ್ ವಿನ್ಯಾಸ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.