ಮನಸ್ಸಿನ ಶಾಂತಿ, ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಯೋಗ: ಸ್ವಾಮಿ ಜಿತಕಾಮಾನಂದಜೀ ಮಹಾರಾಜ್

ಮನಸ್ಸಿನ ಶಾಂತಿ, ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಯೋಗ: ಸ್ವಾಮಿ ಜಿತಕಾಮಾನಂದಜೀ ಮಹಾರಾಜ್


ಮಂಗಳೂರು: ಯೋಗವು ಪ್ರಾಚೀನದಿಂದಲೂ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು, ಜನರಿಗೆ ಶಾಂತತೆ, ಶಾಂತಿ, ಆತ್ಮವಿಶ್ವಾಸ ಮತ್ತು ಧೈರ್ಯವನ್ನು ನೀಡುತ್ತದೆ ಎಂದು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಹೇಳಿದರು.


ಅವರು ಇಂದು ಮಂಗಳಾದೇವಿಯ ಶ್ರೀ ರಾಮಕೃಷ್ಣ ಮಠದಲ್ಲಿ ಡಿಸೆಂಬರ್ ತಿಂಗಳ ಸಂಜೆಯ 5 ಗಂಟೆಯ ಶಿಬಿರವನ್ನು ಉದ್ಘಾಟಿಸಿ, ತಮ್ಮ ಆಶೀರ್ವಚನ ನೀಡಿದರು.


ಯೋಗದ ಮೂಲಕ ಅವರು ಹಲವಾರು ಚಟುವಟಿಕೆಗಳನ್ನು ಉತ್ತಮ ರೀತಿಯಲ್ಲಿ ಮಾಡಬಹುದು. ಅಸ್ತಿತ್ವದ ಪ್ರತಿಯೊಂದು ಹಂತದಲ್ಲೂ ಅದು ಸಾಮರಸ್ಯದ ಸ್ಥಿತಿ. ಯೋಗವನ್ನು ಪ್ರಪಂಚದಾದ್ಯಂತ ವಿವಿಧ ರೂಪಗಳಲ್ಲಿ ಪ್ರಶಂಸಿಸಲಾಗುತ್ತದೆ. ಯೋಗವು ದೇಹ ಮತ್ತು ಮನಸ್ಸು ಎರಡನ್ನೂ ಆರೋಗ್ಯಕರಗೊಳಿಸುತ್ತದೆ. ನಿಯಮಿತವಾಗಿ ಯೋಗಾಭ್ಯಾಸ ಮಾಡಿದರೆ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಉತ್ತಮವಾಗಿ ಬಾಳಬಹುದಾಗಿದೆ ಎಂದರು.


ಯೋಗವು ಮಾನಸಿಕ ಶಾಂತಿಯನ್ನು ನೀಡುವುದಲ್ಲದೆ, ಶಾಂತಿಯುತ ವಾತಾವರಣವನ್ನು ಸೃಷ್ಟಿಸುತ್ತದೆ. ನಮ್ಮ ಜೀವನಶೈಲಿ ದಿನದಿಂದ ದಿನಕ್ಕೆ ಬದಲಾಗುತ್ತಿರುವುದರಿಂದ ಯೋಗ ಮಾಡುವುದು ಸಹ ಕಡ್ಡಾಯವಾಗಿದೆ. ಯೋಗವು ಸ್ನಾಯುಗಳು ಮತ್ತು ದೇಹದ ಸಂಪೂರ್ಣ ಭಾಗಕ್ಕೆ ಶಕ್ತಿಯನ್ನು ನೀಡುತ್ತದೆ. ದೇಹದಲ್ಲಿ ಶಕ್ತಿ ಮತ್ತು ಉಸಿರಾಟದ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಲು ಯೋಗವು ಸಹಕಾರಿಯಾಗಿದೆ ಎಂದು ತಿಳಿಸಿದರು.

ದೇಲಂಪಾಡಿಯೋಗ ಪ್ರತಿಷ್ಠಾನದ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಶಿಬಿರಾರ್ಥಿಗಳಿಗೆ ಯೋಗದ ಮಹತ್ವ ಪ್ರಯೋಜನಗಳನ್ನು ತಿಳಿಸಿದರು. 

ಶಿಬಿರದಲ್ಲಿ ಪ್ರಾರ್ಥನೆ, ಧ್ಯಾನ, ಅಷ್ಟಾಂಗ ಯೋಗದ ಮಾಹಿತಿ, ಆಸನಗಳು, ಪ್ರಾಣಾಯಾಮ ಮಂತ್ರ ಹಾಗೂ ಯಾವ ಕಾಯಿಲೆಗೆ ಯಾವ ಯೋಗ, ಮಂತ್ರ ಮುದ್ರೆಗಳು ತಿಳಿಸಿಕೊಡಲಾಗುವುದು. ಯೋಗಚಕ್ರದ ಮಾಹಿತಿ, ವರ್ಣಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ದೇಲಂಪಾಡಿಯವರು ಶಿಬಿರದ ಮಾಹಿತಿ ತಿಳಿಸಿದರು.

ದೇಲಂಪಾಡಿ ಶಿಷ್ಯರಾದ ಸುಮಾ, ತುಕರಾಮ, ಚಂದ್ರಹಾಸ ಬಾಳ ಹಾಗೂ ಪ್ರೇಮ ಇವರು ಸಹಕರಿಸಿದರು. ಆಸಕ್ತರು ನೋಂದಾಯಿಸಿಕೊಳ್ಳಲು ಆಶ್ರಮದ ಕಾರ್ಯಾಲದ ದೂ.ಸಂ: 0824-2414412 ಸಂಪರ್ಕಿಸಬಹುದಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article