ನ್ಯಾಯಾಲಯಕ್ಕೆ ಹಾಜರಾಗದೇ ತಲೆಮನೆಸಿಕೊಂಡಿದ್ದವನ ಬಂಧನ
Tuesday, December 16, 2025
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳದ ಕಾಸರಗೋಡಿನ ಮಂಜೇಶ್ವರ ತಾಲೂಕಿನ ಉಪ್ಪಳ ನಿವಾಸಿ ಅಬ್ದುಲ್ ರವೂಫ್ ಯಾನೆ ಮೀಸೆ ರವೂಫ್ ಎಂದು ಗುರುತಿಸಲಾಗಿದೆ.
ಆರೋಪಿಯ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 25 ಪ್ರಕರಣಗಳು ದಾಖಲಾಗಿದೆ.
ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿದ್ದು, ಕೋಣಾಜೆ ಠಾಣಾ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿರುತ್ತದೆ. ಮಂಜೇಶ್ವರ ಪೊಲೀಸ್ ಠಾಣೆಯ ಒಂದು ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿದೆ.
ಈತ ಅಂತರಾಜ್ಯ ನಟೋರಿಯಸ್ ಕ್ರಿಮಿನಲ್ ಕೇರಳ ರಾಜ್ಯದ ಉಪ್ಪಳ ಪೈವಳಿಕೆಯ ಇಸುಬು ಜಿಯಾದ್ ಯಾನೆ ಜಿಯಾ ಎಂಬಾತನ ಸಹಚರನಾಗಿರುತ್ತಾನೆ.
ಈತನನ್ನು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ ಕೆ. ಅವರ ನೇತೃತ್ವದಲ್ಲಿ ಎಎಸ್‌ಐ ಚಂದ್ರಶೇಖರ್, ಸಿಬ್ಬಂದಿಗಳಾದ ಹೆಚ್.ಸಿ. ರೆಜಿ ವಿ.ಎಂ, ದಾಮೋದರ ಕೆ. ಮತ್ತು ಹಾಲೇಶ್ ನಾಯ್ಕ್ ಅವರು ಡಿ.16 ರಂದು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.