ಸ್ಕೂಟರ್ ಕಳ್ಳವು: ಇಬ್ಬರ ಬಂಧನ

ಸ್ಕೂಟರ್ ಕಳ್ಳವು: ಇಬ್ಬರ ಬಂಧನ

ಮಂಗಳೂರು: ಸ್ಕೂಟರ್‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

ಬಂಧಿತರನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಎಂದು ಗುರುತಿಸಲಾಗಿದೆ. ನ.೧೪ ರಂದು ಮಂಗಳೂರಿಗೆ ಬಂದಿದ್ದ ಇವರು ಪಡೀಲ್ ರೈಲ್ವೇ ಜಂಕ್ಷನ್ ಪ್ರದೇಶದಲ್ಲಿ ಸುತ್ತಾಡಿದ ಬಳಿಕ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ.30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳಾದ ಅಲೆಕ್ಸ್ ಡೊಮಿನಿಕ್ ಹಾಗೂ ಅಮಲ್ ಕೃಷ್ಣರನ್ನು ಬಂಧಿಸಿ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೊತ್ತ 1.23 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣ ಹಾಗೂ ಅಮಲ್ ಕೃಷ್ಣ ವಿರುದ್ದ ತಲಶೇರಿ ಹಾಗೂ ಕುರಚೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article