ಅಕ್ರಮ ಗೋಸಾಗಾಟದ ಪ್ರಕರಣ ದಾಖಲು: ಮನೆ ಹಾಗೂ ಕೊಟ್ಟಿಗೆ ಜಪ್ತಿ

ಅಕ್ರಮ ಗೋಸಾಗಾಟದ ಪ್ರಕರಣ ದಾಖಲು: ಮನೆ ಹಾಗೂ ಕೊಟ್ಟಿಗೆ ಜಪ್ತಿ


ಮಂಗಳೂರು: ಅಕ್ರಮ ಗೋಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಮನೆ ಮತ್ತು ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣದ ವಿವರ:

ಡಿ.13 ರಂದು ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ತೆರಳಿ, KA-70-8686 ನೇ ನೊಂದಣಿಯ ಸದ್ರಿ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿರುತ್ತದೆ. 

ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ, ಅತನು ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದು, ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ. 

ಮುಂದಿನ ಕಾನೂನುಕ್ರಮಕ್ಕಾಗಿ ಜಾನುವಾರು, ಅಟೋ ಹಾಗೂ ಒಂದು ಮೊಬೈಲ್ ಫೋನ್‌ನ್ನು ವಶಕ್ಕೆ ಪಡೆದು, ಅರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆರೋಪಿತ ಭೋಜ ಮೂಲ್ಯ ಅವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article