ವೈಕುಂಠ ಏಕಾದಶಿ ಆಚರಣೆ

ವೈಕುಂಠ ಏಕಾದಶಿ ಆಚರಣೆ


ಮಂಗಳೂರು: ವೈಕುಂಠ ಏಕಾದಶಿಯನ್ನು ಸಂಪ್ರದಾಯಬದ್ಧವಾಗಿ, ಶಾಸ್ತ್ರೋಕ್ತವಾಗಿ ಇಂದು ಆಚರಿಸಲಾಯಿತು. ನಗರದ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ನಿಮಿತ್ತ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆ ನಡೆಯಿತು.

ಶ್ರೀ ಶೃಂಗೇರಿ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಉಪಸ್ಥಿತಿಯಲ್ಲಿ  ಸಂಜೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಿತು. ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.

ಧನುರ್ಮಾಸದ ಏಕಾದಶಿಯು ವೈಕುಂಠ ಏಕಾದಶೀ ಎಂದು ಪ್ರಸಿದ್ಧ. ‘ನೈಕಾದಶ್ಯಾ: ಪರಂ ವೃತಂ. ಎಂಬ ಮಾತಿನಂತೆ ಏಕಾಧಶಿಗಿಂತ ಶ್ರೇಷ್ಠವಾದ ವೃತ ಬೇರೊಂದಿಲ್ಲ ಎಂಬುದು ಪುರಾಣಗಳಲ್ಲಿ ಉಲ್ಲೇಖವಾಗಿದೆ. ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ಅಂದು ವೆಂಕಟೇಶ್ವರ/ವಿಷ್ಣುದೇವರ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article