ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ
Friday, December 12, 2025
ಮಂಗಳೂರು: ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಮೊದಲ ಬಾರಿ ನೀಡಿದ ಪ್ರತಿಷ್ಠಿತ ‘ಸಹಕಾರಿ ಸಾರ್ವಭೌಮ’ ಪ್ರಶಸ್ತಿ ಹಾಗೂ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾದ ಪ್ರತಿಷ್ಠಿತ ‘ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ’ಯನ್ನು ಸ್ವೀಕರಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಶುಕ್ರವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸನ್ಮಾನಿಸಲಾಯಿತು.
ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಭಿವೃದ್ಧಿಗೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನವನ್ನು ಸಂಘದ ಅಧ್ಯಕ್ಷ ನವೀನ್ ಅಡ್ಯಂತಾಯ ಅವರು ಸ್ಮರಿಸಿ, ಸಂಘದ ಆಡಳಿತ ಮಂಡಳಿಯ ನಿರ್ದೇಶಕರೊಂದಿಗೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಿ, ಅವರಿಗೆ ಇನ್ನಷ್ಟೂ ಉನ್ನತ ಪ್ರಶಸ್ತಿಗಳು ಬರಲಿ ಎನ್ನುವುದೇ ಸಹಕಾರಿಗಳೆಲ್ಲರ ಅಭಿಲಾಶೆ ಎಂದರು.
ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್., ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಬೆಳಂಜೆ ಹರೀಶ್ ಪೂಜಾರಿ, ನಿರ್ದೇಶಕರಾದ ಪುಟ್ಟಣ್ಣ ಭಟ್, ರಾಘವೇಂದ್ರ ನಾಯ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೀನ ನಾಯ್ಕ ಉಪಸ್ಥಿತರಿದ್ದರು.