ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರ ಚಿತ್ರಕಲೆ ಭಾವಚಿತ್ರ ಹಸ್ತಾಂತರ
Tuesday, December 23, 2025
ಮಂಗಳೂರು: 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಂದರ್ಭದಲ್ಲಿ ಪ್ರಿಯದರ್ಶಿನಿ ಕೋ. ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಹೈಸ್ಕೂಲ್ ಮಕ್ಕಳಿಗೆ ನಡೆದ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಭಾವಚಿತ್ರ ರಚಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಚಿತ್ರಕಲೆಯನ್ನು ಪ್ರಿಯದರ್ಶಿನಿ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾಡ್ ಅವರು ರಾಜೇಂದ್ರ ಕುಮಾರ್ ಅವರಿಗೆ ಸೋಮವಾರ ಹಸ್ತಾಂತರಿಸಲಾಯಿತು.
ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಭಾವಚಿತ್ರದ ಚಿತ್ರಕಲೆಯನ್ನು ಸ್ವೀಕರಿಸಿ ಮಾತಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಪ್ರಿಯದರ್ಶಿನಿ ಕೋ.ಅಪರೆಟೀವ್ ಸೊಸೈಟಿ ಸಹಕಾರ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂಸ್ಥೆಯ ಇನ್ನಷ್ಟೂ? ಅಭಿವೃದ್ಧಿಗೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಂಪೂರ್ಣ ದೊರೆಯಲಿದೆ ಎಂದು ತಿಳಿಸಿದರು.
ಸಂದರ್ಭದಲ್ಲಿ ಪ್ರಿಯದರ್ಶಿನಿ ಕೋ.ಆಪರೆಟೀವ್ ಸೊಸೈಟಿಯ. ಸಿಇಒ ಸುದರ್ಶನ್ ಹಾಗೂ ಸಾಲ ವಿಭಾಗದ ಪ್ರಬಂಧಕಿಯಾದ ಅಕ್ಷತಾ ಶೆಟ್ಟಿ ಉಪಸ್ಥಿತರಿದ್ದರು.