ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ

ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ


ಮಂಗಳೂರು: ಮಂಗಳೂರು ನಗರದ ತ್ರಿಶಾ ಶೈಕ್ಷಣಿಕ ಸಮೂಹ ಸಂಸ್ಥೆಗಳ ಅಂಗ ಸಂಸ್ಥೆಯಾದ ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವದ ಆಚರಣೆಯು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.

 ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಹಳೆ ನ್ಯೂಸ್ ನೆಟ್ ವರ್ಕ್ ನ ಸಂಸ್ಥಾಪಕರು, ಸಂಪಾದಕರು ಮತ್ತು ಮುಖ್ಯಸ್ಥರಾದ ಶ್ರೀ ಶ್ಯಾಮ್ ಸುದರ್ಶನ್ ಹೊಸಮೂಲೆಯವರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅವರು ಅನುಭವಗಳು ಬದುಕನ್ನು ಕಲಿಸುತ್ತವೆ. ಆ ಅನುಭವಗಳ ಮೂಲಕ ಜೀವನವು ಸಾಧನೆಯ ಕಡೆಗೆ ಸಾಗಬೇಕು. ಆ ಸಾಧನೆಯಲ್ಲಿ ನಾವು ಮೊದಲಿಗರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನುತ್ರಿಶಾ ಶೈಕ್ಷಣಿಕ ಸಮೂಹ ಸಂಸ್ಥೆಗಳ ಸಂಸ್ಥಾಪಕರು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳಾದ ಸಿ ಎ ಗೋಪಾಲಕೃಷ್ಣ ಭಟ್ ಅವರು ವಹಿಸಿದ್ದರು. ಅವರು ಸತತ ಪರಿಶ್ರಮವೇ ಸಾಧನೆಯ ಮೆಟ್ಟಿಲು, ಪರಿಶ್ರಮವಿಲ್ಲದೇ ಸಾಧನೆಯ ಶಿಖರ ಏರಲು ಸಾಧ್ಯವಿಲ್ಲ ಎಂದು ಹೇಳಿದರು.

ಗೌರವಾನ್ವಿತ ಅತಿಥಿಗಳಾಗಿ ತ್ರಿಶಾ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ.ನಾರಾಯಣ ಕಾಯರಕಟ್ಟೆ ಅವರು ಭಾಗವಹಿಸಿದರು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಬಹಳ ತನ್ಮಯವಾಗಿ ಹಾಗೂ ಪ್ರಾಮಾಣಿಕವಾಗಿ ತಮ್ಮನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಯಶಸ್ವಿನಿ ಯಶ್ಪಾಲ್ ಅವರು ವಾರ್ಷಿಕ ವರದಿಯನ್ನು ವಾಚಿಸಿದರು, ಶೈಕ್ಷಣಿಕವಾಗಿ ತೊಡಗಿಸಿಕೊಂಡು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಹಲವು ವಿದ್ಯಾರ್ಥಿಗಳಿಗೆ ಪಾರಿತೋಷಕವನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು. ಸಭಾ ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಅನ್ವಿ ಎಸ್ ಶೆಟ್ಟಿ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು. ವಾಣಿಜ್ಯ ಶಾಸ್ತ್ರದ ಪ್ರಾಧ್ಯಾಪಕಿ ಶ್ರೀಮತಿ ವೀಣಾ ಶೆಟ್ಟಿಯವರು ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರದ ಪ್ರಾಧ್ಯಾಪಕಿ ಕುಮಾರಿ ನಮ್ರತಾ ಶೆಟ್ಟಿ ಯವರು ವಂದಿಸಿದರು.

ವಿದ್ಯಾರ್ಥಿಗಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಇದೇ ಸಂದರ್ಭದಲ್ಲಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸುಹಾನಿ ಹಾಗೂ ತಂಡದವರು ಅಚ್ಚುಕಟ್ಟಾಗಿ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article