ಮಾದಕ ದ್ರವ್ಯ ಸಾಗಾಟದ ಕಾರು ಅಪಘಾತ: ಮಾದಕ ದ್ರವ್ಯ ವಶಕ್ಕೆ

ಮಾದಕ ದ್ರವ್ಯ ಸಾಗಾಟದ ಕಾರು ಅಪಘಾತ: ಮಾದಕ ದ್ರವ್ಯ ವಶಕ್ಕೆ


ಮಂಗಳೂರು: ನಗರದಲ್ಲಿ ಪೊಲೀಸರು ಮಾದಕ ದ್ರವ್ಯ ವಿರುದ್ಧ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ಪೆಡ್ಲರ್‌ಗಳು ಮಾತ್ರ ಪೊಲೀಸರ ಕಣ್ಣು ತಪ್ಪಿಸಿ ರಾಷ್ಟ್ರೀಯ ಹೆದ್ದಾರಿಗಳಲ್ಲೇ ರಾಜಾರೋಷವಾಗಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದಾರೆ. ಇದಕ್ಕೆ ಜ್ವಲಂತ ನಿದರ್ಶನವೆಂಬಂತೆ ಮಂಗಳೂರಿನಿಂದ ಕೇರಳಕ್ಕೆ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಎಂಡಿಎಂ ಡ್ರಗ್ಸನ್ನು ಸಾಗಾಟ ನಡೆಸುತ್ತಿದ್ದ ಕಾರೊಂದು ತಲಪಾಡಿಯಲ್ಲಿ ನಿಂತಿದ್ದ ಟ್ಯಾಂಕರ್ ಒಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು ಈ ವೇಳೆ ಕಾರು ಚಾಲಕ ಪರಾರಿಯಾಗಿದ್ದು, ಸಹ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. 

ಮಂಗಳವಾರ ಬೆಳಗ್ಗೆ 7.30ರ ವೇಳೆ ಮಂಗಳೂರಿನಿಂದ ಉಪ್ಪಳದ ಕಡೆಗೆ ಹೋಗುತ್ತಿದ್ದ ಕಾರು ತಲಪಾಡಿಯ ಆರ್‌ಟಿಓ ಚೆಕ್ ಪೋಸ್ಟ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಹ ಸವಾರ ಆದಮ್ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳು ಆದಮ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರು ಚಾಲಕ ಸಿದ್ಧೀಕ್ ಎಂಬಾತ ಪರಾರಿಯಾಗಿದ್ದು ,ಕಾರಿನಲ್ಲಿದ್ದ 3.90 ಲಕ್ಷ ಮೌಲ್ಯದ 78 ಗ್ರಾಂ ಎಮ್ ಡಿಎಮ್ ಮಾದಕ ಪದಾರ್ಥವನ್ನು ಉಳ್ಳಾಲ ಪೊಲೀಸರು ದಸ್ತಗಿರಿ ನಡೆಸಿದ್ದಾರೆ. 

ಕಾರಿನಲ್ಲಿದ್ದ ಸಿದ್ಧೀಕ್ ಮತ್ತು ಆದಮ್ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಗಳು. ಅಪಘಾತದ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article