ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳನ ಬಂಧನ
Friday, December 5, 2025
ಮಂಗಳೂರು: ಅನೇಕ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳನನ್ನು ಪೊಲೀಸರು ಬಂಧಿಸಿ, 4 ದ್ವಿಚಕ್ರ ವಾಹನ ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂನ ವಲಿಯರ್ತಲದ ವೆಲ್ಲಟ್ಟಿ ವೀಡು ನಿವಾಸಿ ಆದಿತ್ ಗೋಪಾನ್ ಯಾನೆ ಮುತ್ತು ಕೃಷ್ಣ (32) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಯಿಂದ 4 ದ್ವಿ ಚಕ್ರ ವಾಹನ ಮತ್ತು ಚಿನ್ನಾಭರಣ ಸಮೇತ ಒಟ್ಟು 5 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 6 ಪ್ರಕರಣಗಳು ದಾಖಲಾಗಿವೆ.