ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನದ ಮೇಲ್ಫಾವಣಿ ಹಾಗೂ ನೆಲಹಾಸು ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ನೇತೃತ್ವದಲ್ಲಿ ಭೂಮಿಪೂಜೆ
Wednesday, December 3, 2025
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 27ನೇ ಬೋಳೂರು ವಾರ್ಡಿನ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನಕ್ಕೆ ನೂತನವಾಗಿ ನಿರ್ಮಾಣಗೊಳ್ಳಲಿರುವ ಮೇಲ್ಫಾವಣಿ ಹಾಗೂ ನೆಲಹಾಸು ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರು ನೇತೃತ್ವದಲ್ಲಿ ನಡೆಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ದೈವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಕೆಲವು ಅಭಿವೃದ್ಧಿ ಕಾರ್ಯಗಳು ಅಗತ್ಯವಾಗಿ ನಡೆಯಬೇಕಾಗಿದ್ದು ಆ ಬಗ್ಗೆ ಸ್ಥಳೀಯ ಬಿಜೆಪಿ ಪ್ರಮುಖರು, ದೇವಸ್ಥಾನಕ್ಕೆ ಸಂಬಂಧಪಟ್ಟವರು ಮಾಡಿದ ಮನವಿಯಂತೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ವಾರ್ಡ್ ಅಧ್ಯಕ್ಷರಾದ ದಿನೇಶ್, ಸ್ಥಳೀಯ ಪ್ರಮುಖರಾದ ಮೋಹನ್ ಬರ್ಕೆ, ರಘು ಶೆಟ್ಟಿ, ರವೀಂದ್ರ ಆಚಾರಿ, ರವೀಂದ್ರ ಶೆಣೈ, ವಿಜೇಂದ್ರ ಸಾಲ್ಯಾನ್, ತಿಲಕ್ ರಾಜ್ ಕೋಟ್ಯಾನ್, ಭಾಸ್ಕರ ಚಂದ್ರ ಶೆಟ್ಟಿ, ಸದಾಶಿವ ಪೂಜಾರಿ, ದಾಮೋದರ ಶೆಟ್ಟಿ, ಸಂದೀಪ್ ಪೂಜಾರಿ, ಗೌತಮ್ ಸುವರ್ಣ, ವಿಶಾಲ್ ಮೊದಲಾದವರು ಉಪಸ್ಥಿತರಿದ್ದರು.
