ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಸೂತ್ರ: ಡಾ. ಅರ್ಪಿತಾ ಎ. ರಂಜನ್

ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಸೂತ್ರ: ಡಾ. ಅರ್ಪಿತಾ ಎ. ರಂಜನ್

ಮಂಗಳೂರು: ಯಶಸ್ಸು ಒಂದು ದಿನದಲ್ಲಿ ಸಿಗುವುದಿಲ್ಲ, ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ ಮತ್ತು ಆತ್ಮವಿಶ್ವಾಸ ಇದ್ದರೆ ಗುರಿಯನ್ನು ಸಾಧಿಸಬಹುದು. ವಿದ್ಯಾರ್ಥಿ ಜೀವನದಲ್ಲಿ ಸಮಯದ ಮೌಲ್ಯವನ್ನು ಅರಿತುಕೊಳ್ಳುವುದು ಅತ್ಯಂತ ಮುಖ್ಯವೆಂದು ತಿಳಿಸಿದ ಅವರು ಸಮಯ ಪಾಲನೆ, ಧೈರ್ಯ ಮತ್ತು ಸತತ ಪ್ರಯತ್ನಗಳು ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುತ್ತದೆ ಎಂದು ಎಕ್ಸ್‌ಪರ್ಟ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಖ್ಯಾತ ಮಕ್ಕಳ ವೈದ್ಯೆ ಡಾ. ಅರ್ಪಿತಾ ಎ. ರಂಜನ್ ಸಲಹೆ ನೀಡಿದರು.

ಅವರು ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್‌ನ ‘40ನೇ ಎಕ್ಸ್‌ಪರ್ಟ್ ಡೆ’ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಎಕ್ಸ್‌ಪರ್ಟ್ ಕಾಲೇಜು ತಮಗೆ ನೀಡಿದ ಶಿಸ್ತು, ಆತ್ಮವಿಶ್ವಾಸ ಹಾಗೂ ಮೌಲ್ಯಾಧಾರಿತ ಶಿಕ್ಷಣವೇ ತಮ್ಮ ವೃತ್ತಿ ಜೀವನದ ಬಲವಾದ ಅಡಿಪಾಯವಾಗಿದೆ ಎಂದರು.

ಕಾರ್ಯಕ್ರಮಕ್ಕೆ ಕಾಲೇಜಿನ ಅಧ್ಯಕ್ಷರಾದ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಅಧ್ಯಕ್ಷತೆ ವಹಿಸಿ ‘40ನೇ ಎಕ್ಸ್‌ಪರ್ಟ್ ಡೆ’ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸುವ ಮುಖಾಂತರ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುತ್ತದೆ ಎಂದು ಎಕ್ಸ್‌ಪರ್ಟ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಖ್ಯಾತ ಮಕ್ಕಳ ವೈದ್ಯೆ ಡಾ. ಅರ್ಪಿತಾ ಎ. ರಂಜನ್ ಸಲಹೆ ನೀಡಿದರು.

ಅವರು ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್‌ನ ‘40ನೇ ಎಕ್ಸ್‌ಪರ್ಟ್ ಡೆ’ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಎಕ್ಸ್‌ಪರ್ಟ್ ಕಾಲೇಜು ತಮಗೆ ನೀಡಿದ ಶಿಸ್ತು, ಆತ್ಮವಿಶ್ವಾಸ ಹಾಗೂ  ಮೌಲ್ಯಾಧಾರಿತ ಶಿಕ್ಷಣವೇ ತಮ್ಮ ವೃತ್ತಿ ಜೀವನದ ಬಲವಾದ ಅಡಿಪಾಯವಾಗಿದೆ ಎಂದರು.

ಕಾರ್ಯಕ್ರಮಕ್ಕೆ ಕಾಲೇಜಿನ ಅಧ್ಯಕ್ಷರಾದ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಅಧ್ಯಕ್ಷತೆ ವಹಿಸಿ ‘40ನೇ ಎಕ್ಸ್‌ಪರ್ಟ್ ಡೆ’ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸುವ ಮುಖಾಂತರ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ. ಎನ್. ನಾಯಕ್ ಸಂಸ್ಥೆಯ 40 ವರ್ಷಗಳ ಶೈಕ್ಷಣಿಕ ಪಯಣವನ್ನು ಸ್ಮರಿಸುತ್ತಾ, ಮೌಲ್ಯಾಧಾರಿತ ಹಾಗೂ ಗುಣಮಟ್ಟದ ಶಿಕ್ಷಣವೇ ಸಮಾಜದ ಸ್ಥಿರ ಅಭಿವೃದ್ಧಿಗೆ ಮೂಲಸ್ತಂಭ ಎಂದು ಹೇಳಿದರು.

ಸಮಾಜಮುಖಿ ಚಿಂತನೆ, ಶಿಸ್ತಿನ ಜೀವನ ಸ್ಪಷ್ಟವಾದ ಗುರಿಯಿಂದ ಮಾತ್ರ ಸಮಗ್ರ ಯಶಸ್ಸು ಸಾಧ್ಯವೆಂದು ಹೇಳಿದರು. ಸಂಸ್ಥೆಯ ಬೆಳವಣಿಗೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಕಾರ ಮಹತ್ತ್ವದ ಪಾತ್ರವಹಿಸಿದೆ ಎಂದು ಕೃತಜ್ಞತೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಎಕ್ಸ್‌ಪರ್ಟ್ ಸಂಸ್ಥೆ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್ ಅವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಾದ ಸ್ಮರಾಮಿ ಹಾಗೂ ಧನ್ವಿತ್ ಕಾರ್ಯಕ್ರಮವನ್ನು ನಿರೂಪಿಸಿದರು.

‘ಎಕ್ಸ್‌ಪರ್ಟ್ ಡೆ’ ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗಾಗಿ ಸುಮಾರು 15ಕ್ಕೂ ಹೆಚ್ಚು ಸ್ಪರ್ಧೆಯನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.

ಶೈಕ್ಷಣಿಕ ಸಾಲಿನ ಬಹುಮಾನ ವಿತರಣಾ ಸಮಾರಂಭವು ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಹಾಗೂ ಹಿರಿಯ ವಕೀಲರಾದ ಅಮೃತ್ ಕಿಣಿ ಅವರಿಂದ ನೆರವೇರಿತು. ಶೈಕ್ಷಣಿಕ ಸಾಲಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಬಹುಮಾನವನ್ನು ಈ ಸಂದರ್ಭದಲ್ಲಿ ನೀಡಲಾಯಿತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿ, ಕಾನೂನಿನ ಅರಿವು ಹಾಗೂ ನೈತಿಕ ಜೀವನ ಮೌಲ್ಯಗಳ ಮಹತ್ತ್ವವನ್ನು ಅರಿತಿರಬೇಕೆಂದು ಕರೆ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article