ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ: ಡಾ. ಎಂ.ಎನ್. ರಾಜೇಂದ್ರ ಕುಮಾರ್

ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ: ಡಾ. ಎಂ.ಎನ್. ರಾಜೇಂದ್ರ ಕುಮಾರ್


ಮಂಗಳೂರು: ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ನೌಕರರಿಗಾಗಿ ಕ್ರೀಡಾಕೂಟ ಏರ್ಪಡಿಸಿ ಅವರಲ್ಲಿ ಹುಮ್ಮಸ್ಸು ತುಂಬುವ ಕಾರ್ಯಕ್ರಮ ಶ್ಲಾಘನೀಯವಾದುದು. ಸದಾಕಾಲ ಕೆಲಸದ ಒತ್ತಡದಲ್ಲಿ ಇರುವ ನೌಕರರು ಜಂಜಡವನ್ನು ಮರೆತು ಸೌಹಾರ್ದಯುತವಾಗಿ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ ಮಂಗಳೂರು ಇದರ ಕ್ರೀಡಾಕೂಟವು ಶನಿವಾರ ಬೆಳಗ್ಗೆ ಮಂಗಳಾ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹ ನಿರ್ದೇಶಕ ಪ್ರದೀಪ್ ಡಿಸೋಜ ಮಾತನಾಡಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಸಹಕಾರಿ ಕ್ಷೇತ್ರದಷ್ಟೇ ಕ್ರೀಡಾ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಾ ಬಂದವರು. ನೌಕರರು ಒಂದಾಗಿ ಒಂದೆಡೆ ಕಲೆತು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಖುಷಿಯ ವಿಚಾರ ಎಂದರು.

ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಕಾರ್ಯ ನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ದೇವರಾಜ್ ರೈ, ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಳ್ಯೊಟ್ಟು, ಒಕ್ಕೂಟದ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ಜೋವಿನ್ ಪ್ರಕಾಶ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷ ಕರುಣಾಕರ ಅವರು ಪ್ರಾಸ್ತಾವಿಕ ಮಾತನ್ನಾಡಿ, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷರನ್ನು ನೌಕರರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಗೆದ್ದ ಒಕ್ಕೂಟದ ಸದಸ್ಯರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article