ಚುನಾವಣೆ: ಮದ್ಯದಂಗಡಿ ಮುಚ್ಚಲು ಆದೇಶ

ಚುನಾವಣೆ: ಮದ್ಯದಂಗಡಿ ಮುಚ್ಚಲು ಆದೇಶ

ಮಂಗಳೂರು: ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿ.11 ರಂದು ಚುನಾವಣೆ ಮತ್ತು ಡಿ.13 ರಂದು ಮತ ಎಣಿಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಪ್ರದೇಶಗಳಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಂದು 3 ಕಿ.ಮೀ. ವ್ಯಾಪ್ತಿಯ ಗಡಿಭಾಗಗಳಲ್ಲಿ “ಶುಷ್ಕದಿನ” ಘೋಷಿಸಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿದ್ದು, ಗಡಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ 3 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಬಾರ್ಗಳನ್ನು ಡಿ.9 ರ ಸಂಜೆ 6 ಗಂಟೆಯಿಂದ ಡಿ.11ರ ಸಂಜೆ 6 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಡಿ.12 ರಂದು ಮಧ್ಯರಾತ್ರಿ 12 ಗಂಟೆಯಿಂದ 13 ರ ಮಧ್ಯರಾತ್ರಿ 12 ಗಂಟೆಯ ತನಕ ಮುಚ್ಚುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article