ಸ್ವಾತಂತ್ರ್ಯ ಚಳವಳಿಯಲ್ಲಿ ಎಲ್ಲರನ್ನೂ ಒಳಗೊಳ್ಳುವಂತೆ ಮಾಡಿದವರು ಗಾಂಧಿ: ಅರವಿಂದ ಚೊಕ್ಕಾಡಿ
ಅವರು ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ‘ಮಹಾತ್ಮಾ ಗಾಂಧೀಜಿಯವರ ಚಿಂತನೆಗಳು ಮತ್ತು ಯುವಜನತೆ’ ಎಂಬ ಒಂದು ದಿನದ ಯುವ ಸಮ್ಮೇಳನವನ್ನು ಉದ್ಘಾಟಿಸಿ, ಪ್ರಧಾನ ಭಾಷಣಕಾರರಾಗಿ ಮಾತನಾಡಿದರು.
ಗಾಂಧಿ ಸ್ಮಾರಕ ನಿಧಿ ಸಂಚಾಲಕರಾದ ಡಾ. ಆಬಿದ ಬೇಗಂ ಮತ್ತು ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಶೇಷಪ್ಪ ಕೆ., ಮುಖ್ಯ ಅತಿಥಿಗಳಾಗಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ವಹಿಸಿದ್ದರು. ಐಕ್ಯೂಎಸಿ ಸಂಯೋಜಕರಾದ ದೇವಿಪ್ರಸಾದ್ ಸ್ವಾಗತಿಸಿದರು. ಡಾ. ಜ್ಯೋತಿಪ್ರಿಯ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದ ಭಾಗವಾಗಿ ‘ಗಾಂಧಿ ವ್ಯಕ್ತಿತ್ವದ ಸಾತ್ವಿಕ ಸಂದೇಶಗಳು’ ಎಂಬ ವಿಷಯದ ಬಗ್ಗೆ ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಮತ್ತು ‘ಶಿಕ್ಷಣದಲ್ಲಿ ಗಾಂಧೀಜಿಯವರ ಮಹತ್ವ’ ಎಂಬ ಬಗ್ಗೆ ಡಾ. ಆಬಿದಾ ಬೇಗಂ ವಿಚಾರಗೋಷ್ಠಿಗಳನ್ನು ನಡೆಸಿಕೊಟ್ಟರು.
ಗಾಂಧೀಜಿಯವರ ಜೀವನ ಮತ್ತು ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ವರ್ಧೆ ನಡೆಸಲಾಯಿತು. ಪ್ರಥಮ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ವಿದ್ಯಾರ್ಥಿಗಳು, ದ್ವಿತೀಯ ಸ್ಥಾನವನ್ನು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಮತ್ತು ತೃತೀಯ ಸ್ಥಾನವನ್ನು ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ವಿದ್ಯಾರ್ಥಿಗಳು ಪಡೆದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಮಾನವಿಕ ಸಂಘದ ಸಂಯೋಜಕರುಗಳಾದ ಡಾ. ಲೋಕೇಶ್‌ನಾಥ, ಡಾ. ಮೋಹನದಾಸ್, ಶೋಭಾಮಣಿ, ಜ್ಯೋತಿ ಪಿ., ವಿದ್ಯಾರ್ಥಿ ಕ್ಷೇಮಪಾಲಕರಾದ ಪ್ರೊ. ದುಗ್ಗಪ್ಪ ಕಜೆಕಾರ್, ಸಾಂಸ್ಕೃತಿಕ ಸಂಘದ ಡಾ. ಕೃಷ್ಣಪ್ರಭಾ ಮತ್ತಿತರ ಬೋಧಕರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಧನ್ಯಾ ಮತ್ತು ತ್ರಿಶಾ ಗಾಂಧಿ ಭಜನೆಗಳನ್ನು ಹಾಡಿದರು. ಮಂಗಳೂರು ವಿವಿಯ ವಿವಿಧ ಕಾಲೇಜುಗಳಿಂದ ಆಯ್ದ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರು ಸೇರಿದಂತೆ 200ರಷ್ಟು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.