ಕೆ.ಇ.ಬಿ ಇಂಜಿನಿಯರ್ಗಳ ಸಂಘದ ನೂತನ ರಾಜ್ಯಾಧ್ಯಕ್ಷರು ಮಂಗಳೂರಿಗೆ ಭೇಟಿ
Monday, December 8, 2025
ಮಂಗಳೂರು: 2025-28ನೇ ಸಾಲಿನ ಕೆ.ಇ.ಬಿ. ಇಂಜಿನಿಯರ್‌ಗಳ ಸಂಘಕ್ಕೆ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಇಂಜಿನಿಯರ್ ಬಸವಣ್ಣ ಸಿ. ಮತ್ತು ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರು ಡಿ.6 ರಂದು ಮಂಗಳೂರಿಗೆ ಭೇಟಿ ನೀಡಿದರು.
ಕೆ.ಇ.ಬಿ.ಇ.ಎ ಗಾರ್ಡನ್ ಬೊಂದೆಲ್, ಕಾವೂರು ಇಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಂಗಳೂರು ವಲಯ ಕ.ವಿ.ಮಂ ಇಂಜಿನಿಯರ್ಗಳ ಸಂಘದ ವತಿಯಿಂದ ನೂತನವಾಗಿ ಚುನಾಯಿತರಾದ ಅಧ್ಯಕ್ಷರು ಮತ್ತು ಕೇಂದ್ರ ಸಮಿತಿಯ ಸದಸ್ಯರನ್ನು ಸನ್ಮಾನಿಸಲಾಯಿತು.
ಮಂಗಳೂರು ವಲಯದ ಮುಖ್ಯ ಇಂಜಿನಿಯರ್ ರವಿಕಾಂತ್ ಆರ್. ಕಾಮತ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಆರ್., ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್ ವಿ., ಮುಖ್ಯ ಆರ್ಥಿಕ ಅಧಿಕಾರಿ ಮುರಳಿಧರ್ ನಾಯಕ್, ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಎಸ್. ಲೋಹಿತ್ ಉಪಸ್ಥಿತರಿದ್ದರು.
ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಭಾಷಣ ಮಾಡಿದರು. ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ಸ್ವಾಗತಿಸಿ, ಮಂಜುಳ ಶೆಟ್ಟಿ ನಿರೂಪಿಸಿದರು. ಅಧೀಕ್ಷಕ ಇಂಜಿನಿಯರ್ ಚೈತನ್ಯ ವಂದಿಸಿದರು.