ಕುವೆಂಪು ವಿಶ್ವಮಾನವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಲು ಸದಾಶಿವ ಉಳ್ಳಾಲ್ ಕರೆ

ಕುವೆಂಪು ವಿಶ್ವಮಾನವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಲು ಸದಾಶಿವ ಉಳ್ಳಾಲ್ ಕರೆ


ಮಂಗಳೂರು: ಕುವೆಂಪುರವರ ಸಾಹಿತ್ಯವನ್ನು ವಿದ್ಯಾರ್ಥಿಗಳು ಓದಬೇಕು. ಅವರ ವಿಶ್ವಮಾನವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಕರೆ ನೀಡಿದರು.


ಅವರು ಇಂದು ಬಲ್ಮಠದ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಮಾನವ ದಿನಾಚರಣೆ (ರಾಷ್ಟ್ರಕವಿ ಕುವೆಂಪುರವರ ಜನ್ಮದಿನ)ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕುವೆಂಪು ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ ಮಾತನಾಡಿ, ಕುವೆಂಪುರವರ ಸಾಹಿತ್ಯವು ಕನ್ನಡ ಸಾರಸ್ವತ ಲೋಕವನ್ನು ಉತ್ತುಂಗಕ್ಕೇರಿಸಿತು ಎಂದರು.

ನಿವೃತ ಕನ್ನಡ ಪ್ರಾಧ್ಯಾಪಕಿ ಡಾ. ನಾಗವೇಣಿ ಮಂಚಿ ಅವರು ವಿಶ್ವಮಾನವ ದಿನಾಚರಣೆಯ ಮಹತ್ವ, ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಬಗ್ಗೆ ಸಂದೇಶವನ್ನು ನೀಡಿದರು. 

ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಪ್ರಾಂಶುಪಾಲೆ ವನಿತಾ ದೇವಾಡಿಗ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಉಪಸ್ಥಿತರಿದ್ದರು. ಉಪನ್ಯಾಸಕ ಉಮೇಶ್ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article