ಚುನಾವಣೆ: ನಿಷೇಧಾಜ್ಞೆ ಜಾರಿ
ಮಂಗಳೂರು: ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 24 ರಂದು ಮತ ಎಣಿಕೆಯು ಮಂಗಳೂರು ತಾಲೂಕು ಆಡಳಿತ ಸೌಧ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ನಡೆಯಲಿರುವುದರಿಂದ, ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂತಿ ಕಾಪಾಡುವ ಸಲುವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಮತ ಎಣಿಕೆ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
ಮದ್ಯದಂಗಡಿ ಮುಚ್ಚಲು ಆದೇಶ..
ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 24 ರಂದು ಮತ ಎಣಿಕೆಯು ಮಂಗಳೂರು ತಾಲೂಕು ಆಡಳಿತ ಸೌಧ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ನಡೆಯಲಿರುವುದರಿಂದ, ಮತ ಎಣಿಕೆ ಪ್ರಕ್ರಿಯೆಯು ಸುಗಮವಾಗಿ, ಶಾಂತಿಯುತವಾಗಿ ನಡೆಯುವ ಸದುದ್ದೇಶದಿಂದ ಹಾಗೂ ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ “ಶುಷ್ಕ ದಿನ” ಎಂದು ಘೋಷಿಸಿ ಮತ ಎಣಿಕೆ ನಡೆಯುವ ಕೇಂದ್ರದಿಂದ 100 ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧದ ಮದ್ಯದಂಗಡಿಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.