ಮಂಗಳೂರು ಜೈಲಿನಲ್ಲಿ ಮೊಬೈಲ್ ಪತ್ತೆ

ಮಂಗಳೂರು ಜೈಲಿನಲ್ಲಿ ಮೊಬೈಲ್ ಪತ್ತೆ

ಮಂಗಳೂರು: ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇವು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಈ ಕುರಿತು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಮಹಾನಿರ್ದೇಶಕ ಅಲೋಕ್ ಕುಮಾರ್‌ಗೆ ದೂರವಾಣಿ ಮೂಲಕ ಮಾಹಿತಿ ನೀಡಲಾಗಿದೆ ಎಂದು  ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.

ಅಲೋಕ್ ಕುಮಾರ್ ಇತ್ತೀಚಿಗೆ ಮಂಗಳೂರು ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article