ಧರಣಿ ಮಂಟಪಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಭೇಟಿ: ಮನವಿ ಸ್ವೀಕಾರ
Monday, December 1, 2025
ಸುರತ್ಕಲ್: ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ವತಿಯಿಂದ ಸುರತ್ಕಲ್ ನಗರ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂಬ ಪ್ರಧಾನ ಬೇಡಿಕೆಯನ್ನು ಮುಂದಿಟ್ಟು ನಡೆಯುತ್ತಿರುವ 12 ತಾಸುಗಳ ಸಾಮೂಹಿಕ ಧರಣಿ ಮಂಟಪಕ್ಕೆ ತಾಲೂಕು ವೈದ್ಯಾಧಿಕಾರಿ ಡಾ. ಸುಜಯ ಭಂಡಾರಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಈ ಹಿಂದೆ ಹಲವು ಭಾರಿ ನಡೆದಿರುವ ಹೋರಾಟಗಳ ಸಂದರ್ಭ ನೀಡಿರುವ ಮನವಿಯ ಆಧಾರದಲ್ಲಿ ಸಮುದಾಯ ಆಸ್ಪತ್ರೆ ಸ್ಥಾಪನೆಯ ಪ್ರಸ್ತಾವನೆ ವಿವಿಧ ಸಂದರ್ಭದಲ್ಲಿ ಆರೋಗ್ಯ ಇಲಾಖೆಗೆ ಕಳುಹಿಸಿರುವುದಾಗಿ ತಿಳಿಸಿದರು. ಈ ಮನವಿಯ ಆಧಾರದಲ್ಲಿ ಮತ್ತೊಮ್ಮೆ ಇಲಾಖೆಗೆ ಬೇಡಿಕೆಗಳನ್ನು ಮುಂದಿಟ್ಟು ಕಳುಹಿಸಿ ಕೊಡುವುದಾಗಿ ತಿಳಿಸಿದರು.



