ಮಾದಕ ವಸ್ತು ಎಂಡಿಎಂಎ ಸರಬರಾಜು ಮಾಡುತ್ತಿದ್ದವರ ಬಂಧನ
ಬಂಧಿತರನ್ನು ಬಿಸಿ ರೋಡ್‌ನ ನಿವಾಸಿಗಳಾದ ಅಹಮ್ಮದ್ ಶಾಬೀತ್ (35), ಮಹಮ್ಮದ್ ಶಂಶೀರ್ (36), ನೌಶೀನ (27) ಎಂದು ಗುರುತಿಸಲಾಗಿದೆ.
ಬಂಧಿತರಿಂದ 90 ಗ್ರಾಂ. ಎಂಡಿಎಂಎ ಮಾದಕ ವಸ್ತು, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ವಿವರ:
ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂಎಯನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಸರಬರಾಜು ಮಾಡುತ್ತಿದ್ದಂತಹ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಡಿ.13 ರಂದು ಕಾರಿನಲ್ಲಿ ಬರುತ್ತಿದ್ದ ಅಹಮ್ಮದ್ ಶಾಬೀತ್, ಮತ್ತು ಆತನ ತಂಡವನ್ನು ಅರ್ಕುಳ ಬಳಿ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ.
ಅಹಮ್ಮದ್ ಶಾಬೀತ್ ಎಂಬುವನು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎಯನ್ನು ತಂದು ಸರಬರಾಜು ಮಾಡುತ್ತಿದ್ದು, ಅಲ್ಲದೇ ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ಮಹಿಳೆ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುವಾದ ಎಂಡಿಎಂಎಯನ್ನು ಸಾಗಾಟ ಮಾಡುತ್ತಿರುವುದ್ದನ್ನು, ಮಂಗಳೂರು ನಗರದ ಸಿಸಿಬಿ ಘಟಕದ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ, ಈ ತಂಡವನ್ನು ಈ ದಿನ ದಸ್ತಗಿರಿ ಮಾಡಿರುತ್ತಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿತರಿಗೆ ನ್ಯಾಯಾಂಗ ಬಂಧನ ವಿದಿಸಿದ್ದು, ತನಿಖೆ ಮುಂದುವರೆದಿದೆ.