ಮೆಸ್ಕಾಂನಿಂದ ಕಾನೂನು ಜಾಗೃತಿ ಕಾರ್ಯಕ್ರಮ
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಅವರು ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ಸೇವಾ ಪ್ರಾಧಿಕಾರ ಕಾಯ್ದೆ 1987ರ ಉದ್ದೇಶಗಳು ಮತ್ತು ಕಾರ್ಯಗಳು ಕುರಿತು ಮಾಹಿತಿ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ನ್ಯಾಯವಾದಿಗಳಾದ ಶ್ರೀಮತಿ ಮಾನಸ ಹೆಗ್ಡೆ ಅವರು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾನೂನು (ತಡೆಗಟ್ಟುವಿಕೆ. ನಿಷೇಧ ಮತ್ತು ಉದ್ದೇಶಗಳು) ನಿಬಂಧನೆಗಳು ಮತ್ತು ಪ್ರಾಯೋಗಿಕ ಅನುಸರಣಾ ಕಾರ್ಯವಿಧಾನಗಳು ಕುರಿತು ಮಾಹಿತಿ ನೀಡಿದರು.
ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಮೆಸ್ಕಾಂ ತಾಂತ್ರಿಕ ನಿರ್ದೆಶಕ ಹರೀಶ್ ಕುಮಾರ್ ವಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಆರ್ಥಿಕ ಸಲಹೆಗಾರ ದೇವರಾಜ್, ಪ್ರಧಾನ ವ್ಯವಸ್ಥಾಪಕ ಡಾ. ಮಂಜುನಾಥ್ ಸ್ವಾಮಿ ಉಪಸ್ಥಿತರಿದ್ದರು.
ಎಜಿಎಂ ಪುಷ್ಪರಾಜ್ ಸ್ವಾಗತಿಸಿ, ನಿರೂಪಿಸಿದರು. ನಯನ ವಂದಿಸಿದರು.
ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಕಾರ್ಪೋರೇಟ್ ಕಚೇರಿ/ಮಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಚೇರಿಗಳ ಅಧಿಕಾರಿ/ಸಿಬ್ಬಂದಿಗಳು ಮತ್ತು ಮಂಗಳೂರು ಮತ್ತು ಉಡುಪಿ ವೃತ್ತ ವ್ಯಾಪ್ತಿಯಲ್ಲಿ ಬರುವ ಮಹಿಳಾ ಅಂತರಿಕ ದೂರು ಸಮಿತಿಯ ಅಧ್ಯಕ್ಷರು/ಸದಸ್ಯರು ಹಾಜರಾಗಿದ್ದರು.