ಬಿಜೆಪಿ ಮಹಿಳಾ ಮೋರ್ಚಾ ಸಭೆ
Saturday, December 6, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಸಭೆ ಡಿ.4 ರಂದು ನಡೆಯಿತು.
ಬಳಿಕ ಅವರು ಮಾತನಾಡಿ, ‘ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ’ದ ಅಡಿಯಲ್ಲಿ ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ವಿಶೇಷವಾಗಿ, ಸ್ವದೇಶಿ ಉತ್ಪನ್ನಗಳ ಮಹತ್ವ ಮತ್ತು ಬಳಕೆಯ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಹಾಗೂ ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಬಿಜೆಪಿಯ ಹಿರಿಯ ಕಾರ್ಯಕರ್ತೆ ಲಲಿತ ಸುಂದರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಡಾ. ಮಂಜುಳ ಅನಿಲ್ ರಾವ್ ಪ್ರಸ್ತಾವಿಕವಾಗಿ ಮಾತನಾಡಿದರು.
ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಜಿಲ್ಲಾ ಮತ್ತು ಮಂಡಲ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.