ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮಂಗಳೂರಿನ ಇನಾಯತ್ ಅಲಿಗೂ ಈಡಿ ಸಂಕಟ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮಂಗಳೂರಿನ ಇನಾಯತ್ ಅಲಿಗೂ ಈಡಿ ಸಂಕಟ


ಮಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಈಡಿ ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಅ.3 ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಕೆಶಿ ಆಪ್ತ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಗಳೂರಿನ ಇನಾಯತ್ ಅಲಿಗೂ ಇಒಡಬ್ಲೂ ದಿಲ್ಲಿ ಪೊಲೀಸ್ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಮಾಹಿತಿಯ ಪ್ರಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಸತತವಾಗಿ ಇನಾಯತ್ ಅಲಿ ತನಿಖೆಗೊಳಪಟ್ಟಿದ್ದಾರೆ ಹಾಗೂ ಅದರ ಮುಂದುವರಿದ ಭಾಗವಾಗಿ ಇದೀಗ ದಿಲ್ಲಿ ಪೊಲೀಸರಿಂದ ವಿಚಾರಣೆಗೊಳಪಡುವಂತೆ ನೋಟಿಸ್ ಜಾರಿಯಾಗಿದೆ.

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂದು ತಿಳಿದು ಬಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article