ಪೊಲೀಸ್ ಠಾಣೆ ಮೆಟ್ಟಲೇರಿದ ರಿಷಬ್ ಶೆಟ್ಟಿ ಹರಕೆಯ ನೇಮ ವಿವಾದ

ಪೊಲೀಸ್ ಠಾಣೆ ಮೆಟ್ಟಲೇರಿದ ರಿಷಬ್ ಶೆಟ್ಟಿ ಹರಕೆಯ ನೇಮ ವಿವಾದ

ಮಂಗಳೂರು: ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗೆ ಪಾಲ್ಗೊಂಡ ಹರಕೆಯ ಕೋಲದ ಬಗ್ಗೆ ವಿವಾದ ವ್ಯಕ್ತವಾಗಿದ್ದು, ಕೋಲದ ಸಂದರ್ಭದಲ್ಲಿ ದೈವ ನರ್ತಕನ ವರ್ತನೆಯನ್ನು ದೈವಾರಾಧಕ ತಮ್ಮಣ್ಣ ಶೆಟ್ಟಿ ಸೇರಿ ಹಲವರು ವಿರೋಧಿಸಿದ್ದಾರೆ. 

ಈ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿರುವ ಆಡಳಿತ ಮಂಡಳಿ, ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ನಡೆದಾಗ ಕೋಲದ ಕೆಲ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಈ ವೇಳೆ ದೈವ ನರ್ತಕನ ವರ್ತನೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗಿತ್ತು. ಈ ಕುರಿತು ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಸಮಿತಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.

ಮಂಗಳೂರಿನ ಬಾರೆಬೈಲ್‌ನಲ್ಲಿರುವ ದೈವಸ್ಥಾನದಲ್ಲಿ ಮಗನ ಹುಟ್ಟು ಹಬ್ಬದ ಹಿನ್ನಲೆ ಕಳೆದ ವರ್ಷವೂ ರಿಷಬ್ ಶೆಟ್ಟಿ ಕುಟುಂಬ ನೇಮೋತ್ಸವ ಸೇವೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಿಯೂ ನಡೆಯದ ಚಮತ್ಕಾರ ಈ ಕ್ಷೇತ್ರದಲ್ಲಿ ಆಗಿದೆ ಎಂದು ರಿಷಬ್ ಹೇಳಿಕೊಂಡಿದ್ದರು. ಈ ವರ್ಷದ ದೀಪಾವಳಿ ಸಂದರ್ಭದಲ್ಲಿ ದೈವದ ಅನುಮತಿ ಕೇಳಿ ಹರಕೆ ನೇಮಕ್ಕೆ ಒಪ್ಪಿಗೆ ಪಡೆಯಲಾಗಿದ್ದು, ಪಂಜುರ್ಲಿ ನೇಮ,ಜಾರಾಂದಾಯಗೆ ತುಡರ ಬಲಿ ನೀಡಲು ದೈವ ಒಪ್ಪಿಗೆ ನೀಡಿತ್ತು. ಈ ಸೇವೆ ನೆರವೇರಿದ್ದು, ದೈವಗಳು ಒಳ್ಳೆಯ ರೀತಿ ಸ್ವೀಕಾರ ಮಾಡಿವೆ. ಆದರೆ ಈ ಕ್ಷೇತ್ರ ಬೆಳೆಯಬಾರದೆಂಬ ಕಾರಣಕ್ಕೆ ವಿವಾದ ಹುಟ್ಟು ಹಾಕಿದ್ದಾರೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಪ್ರಮುಖರಾದ ರವಿಪ್ರಸನ್ನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article