ಆಳ್ವಾಸ್ ಕ್ರಿಸ್ಮಸ್-2025-ಕ್ರಿಸ್ಮಸ್ ಜಗತ್ತಿಗೆ ಶಾಂತಿ, ಪ್ರೀತಿ, ಸೌಹಾದ೯ತೆಯನ್ನು ಸಾರುತ್ತದೆ: ವಂ. ಡಾ. ಅಲೋಶಿಯಸ್ ಪೌಲ್ ಡಿಸೋಜ
ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ವಂದನೀಯ ಡಾ. ಅಲೋಶಿಯಸ್ ಪೌಲ್ ಡಿಸೋಜ ಕ್ರಿಸ್ಮಸ್ ಸಂದೇಶ ನೀಡಿ ಪ್ರೀತಿ, ಶಾಂತಿ, ಸೌಹಾರ್ದತೆಯ ಸಂದೇಶವನ್ನು ಕ್ರಿಸ್ಮಸ್ ಇಡೀ ವಿಶ್ವಕ್ಕೆ ನೀಡುತ್ತದೆ. ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗದೇ ಮಾನವೀಯತೆನ್ನು ಸಕಲರಿಗೆ ತೋರಿಸುವುದು ಕ್ರೈಸ್ತ ಧರ್ಮದ ಉದ್ದೇಶ. ಕ್ರಿಸ್‌ಮಸ್ ಹಬ್ಬವು ಕೇವಲ ಸಂಭ್ರಮಕ್ಕೆ ಸೀಮಿತವಾಗದೆ, ಪರಸ್ಪರ ಸಹಬಾಳ್ವೆ, ಮಾನವೀಯತೆ ಮತ್ತು ಮನುಕುಲದ ಸೇವೆಯ ಸಂದೇಶವನ್ನು ಸಾರುತ್ತದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಡಾ. ಆಳ್ವರು ತಮ್ಮ ಜೀವನದಲ್ಲಿ ಬಹಳಷ್ಟು ಎಡರುತೊಡರುಗಳನ್ನು ಕಂಡಿದ್ದಾರೆ. ಅವರು ಸಮಾಜ ಜೀವಿಯಾಗಿ ವ್ಯಕ್ತಿವನ್ನು ಹೊಂದಿರುವುದು ಮಾತ್ರವಲ್ಲ, ತಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ತಮ್ಮದೇ ರೀತಿಯಲ್ಲಿ ನೀಡಿದ್ದಾರೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ `ಮಿನಿ ಇಂಡಿಯಾ' ಪರಿಕಲ್ಪನೆಯೊಂದಿಗೆ ನಾವು ವಿವಿಧ ಧರ್ಮಗಳ ಹಬ್ಬಗಳನ್ನು ಸಂಸ್ಥೆಯಲ್ಲಿ ಆಚರಿಸುತ್ತಿದ್ದೇವೆ. ದೇಶಿಯ ಚಿಂತನೆ, ಸಾಮಾಜಿಕ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಮನದಟ್ಟು ಮಾಡಬೇಕೆನ್ನುವ ಉದ್ದೇಶದಿಂದ ಪ್ರತಿಯೊಂದು ಹಬ್ಬಗಳನ್ನು ಆಚರಿಸುತ್ತಿದ್ದೇವೆಯೇ ಹೊರತು ಯಾರನ್ನು ಮೆಚ್ಚಿಸಲು ಅಲ್ಲ. ಮಕ್ಕಳಲ್ಲಿ ಮನಸ್ಸು ಕಟ್ಟುವ ಪ್ರಯತ್ನವನ್ನು ಅರ್ಥಪೂರ್ಣವಾಗಿ ಮಾಡುತ್ತಿದ್ದೇವೆ ಎಂದರು.
ಸಾಂಸ್ಕೃತಿಕ ಮೆರುಗು:
ಕಾರ್ಯಕ್ರಮದ ಆರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ತಂಡದಿಂದ ಆಕರ್ಷಕ ಮೆರವಣಿಗೆ ನಡೆಯಿತು. ಸ್ತುತಿ ಮತ್ತು ಆರಾಧನೆಯೊಂದಿಗೆ ವೇದಿಕೆಯ ಕಾರ್ಯಕ್ರಮಗಳು ಸಂಪನ್ನಗೊಂಡವು. ನಂತರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು 'ರಂಗ್-ತರಂಗ್' ತಂಡದವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.
