ರಾಜ್ಯ ಮಟ್ಟದ ಪ.ಪೂ ಕಾಲೇಜುಗಳ ಬಾಲಕ & ಬಾಲಕಿಯರ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಶಿಫ್: ಆಳ್ವಾಸ್ ಪ.ಪೂ. ಕಾಲೇಜಿಗೆ 20ನೇ ಬಾರಿ ಅವಳಿ ಸಮಗ್ರ ಪ್ರಶಸ್ತಿ
Monday, December 8, 2025
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ( ಪ.ಪೂ) ಹಾಸನ ಹಾಗೂ ಎಚ್‌ಎಸ್‌ಕೆ ಪ.ಪೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.
ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿಯನ್ನು 20ನೇ ಬಾರಿಗೆ ತನ್ನದಾಗಿಸಿಕೊಂಡಿತು. ವಿಜೇತ ತಂಡದ ಸದಸ್ಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.