ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ: ಡಿ. 21ರಂದು ವಿವಿಧ ಸ್ಪಧೆ೯ಗಳು
ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತು, ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ 2026ರ ಜ17ರಂದು ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಕನ್ನಡ ಗೀತೆ(ಸಮೂಹ ಗಾಯನ)ಮತ್ತು ಜಾನಪದ ಗೀತೆ(ವೈಯಕ್ತಿಕ)ಗಳೆಂಬ ಐದು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ.
ಸ್ಪರ್ಧೆಗಳನ್ನು ಡಿ. 21ರಂದು ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಪದವಿ ಕಾಲೇಜಿನಲ್ಲಿ ನಡೆಸಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ದೃಢೀಕರಣದೊಂದಿಗೆ ತಮ್ಮ ಹೆಸರನ್ನು ಡಿ. 18 ರ ಒಳಗಾಗಿ ನೋಂದಾಯಿಸಿ ಪ್ರವೇಶ ಪತ್ರವನ್ನು ವಾಟ್ಸಪ್ ಸಂಖ್ಯೆ 9663180107 ಅಥವಾ ಇಮೇಲ್ kasapamoodubidiretalukghataka@gmail.com 2 & 5.2.2 ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಜೇತರಿಗೆ ಬಹುಮಾನಗಳನ್ನು ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರಗಳನ್ನು ಸಾಹಿತ್ಯ ಸಮ್ಮೇಳನದಲ್ಲಿ ನೀಡಿ ಗೌರವಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.