ಹಿರಿಯ ಮದ್ದಲೆಗಾರ ಪದ್ಯಾಣ ಶಂಕರನಾರಾಯಣ ಭಟ್ ಗೆ 5 ನೇ ವಷ೯ದ ಶ್ರೀ ಹರಿಲೀಲಾ ಯಕ್ಷಗಾನ ಪ್ರಶಸ್ತಿ ಪ್ರದಾನ
ಪ್ರಶಸ್ತಿ ಪ್ರದಾನ: ಯಕ್ಷಗಾನದ ಹಿರಿಯ ಮದ್ದಲೆಗಾರ ಪದ್ಯಾಣ ಶಂಕರನಾರಾಯಣ ಭಟ್ ಅವರಿಗೆ 2025ನೇ ಸಾಲಿನ ಹರಿಲೀಲಾ ಯಕ್ಷಗಾನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪತ್ನಿ ವನಜಾಕ್ಷಿ ಭಟ್ ಅವರನ್ನು ಗೌರವಿಸಲಾಯಿತು.
ಯಕ್ಷಗಾನ ಕಲಾವಿದ ವಾಸುದೇವ ರಂಗ ಭಟ್ ಅಭಿನಂದನಾ ಭಾಷಣ ಗಂಭಿರ ವ್ಯಕ್ತಿತ್ವ, ಸೌಂದರ್ಯದ ಮೂರ್ತರೂಪದಂತಿರುವ ಪದ್ಯಾಣ ಶಂಕರನಾರಾಯಣ ಭಟ್ ಯಕ್ಷಗಾನದ ಸ್ಟಾರ್ ಕಲಾವಿದರು. ಹಿಮ್ಮೇಳ ಕಲಾದವಿರಿಗೆ ಇವರು ಮಾದರಿ ಮತ್ತು ಆದರ್ಶರಾಗಿದ್ದಾರೆ. ಚೆಂಡೆ ಯಕ್ಷಗಾನದ ಭಾಗವಾಗಿ ಬಂದಿದ್ದು ಇದರ ಬಳಕೆಯ ಕುರಿತು ಅಭ್ಯಾಸಿ ವಲಯದಲ್ಲಿ ಚರ್ಚೆಯಾಗಲಿ ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪದ್ಯಾಣ ಶಂಕರನಾರಾಯಣ ಭಟ್ ೪ ದಶಕಗಳ ಕಾಲ ಯಕ್ಷಗಾನ ತಿರುಗಾಟ ನಡೆಸಿದ್ದು ಕಲೆಗೆ ತನ್ನದೇ ಆದ ಕೊಡುಗೆ ನೀಡಿದ್ದೇನೆ. ಈ ಪ್ರಶಸ್ತಿಯು ಕಲೆಗೆ ಸಂದ ಗೌರವವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಕೆ. ಶ್ರೀಪತಿ ಭಟ್ ಭಾಗವಹಿಸಿ ಮಾತನಾಡಿದರು. ಡಿಜಿ ಯಕ್ಷ ಫೌಂಡೇಶನ್‌ನ ನಿರ್ದೇಶಕ ಅವಿನಾಶ್ ಬೈಪಡಿತ್ತಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೈತ್ರಿ ಭಟ್ ಸನ್ಮಾನ ಪತ್ರ ವಾಚಿಸಿದರು. ಚೇತನ್ ಕತ್ತಲ್‌ಸಾರ್ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ ನಿರ್ವಹಿಸಿದರು.

