ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ಮಹಾವೀರ ಕಾಲೇಜಿಗೆ ಭೇಟಿ
Saturday, December 27, 2025
ಮೂಡುಬಿದಿರೆ: ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮೈಸೂರು ಅವರು ಪ್ರಾಧಿಕಾರದ ವಿವಿಧ ಯೋಜನೆಗಳಾದ “ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮದ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು ಅದರಂತೆ ಶನಿವಾರ ಶ್ರೀ ಮಹಾವೀರ ಕಾಲೇಜಿಗೆ ಭೇಟಿ ನೀಡಿದರು.
ಅವರೊಂದಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಆಪ್ತ ಕಾರ್ಯದರ್ಶಿ ಪ್ರೊ. ಶ್ರೀನಿವಾಸ ಅವರು ಭಾಗವಹಿಸಿದ್ದರು.
ಕಾಲೇಜಿನ ಆಡಳಿತಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಮತ್ತು ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಬರಮಾಡಿಕೊಂಡು ಕರ್ನಾಟಕದ ಮನೆ ಗ್ರಂಥಾಲಯದ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಅವರು ಕಾಲೇಜಿನ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳನ್ನು ವೀಕ್ಷಿಸಿ ಗ್ರಂಥಾಲಯದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು.