ಅಕ್ರಮ-ಸಕ್ರಮ ಸಮಿತಿ ಸಭೆ ನಡೆಸುವಂತೆ ಶಾಸಕರಿಗೆ ವಾಸುದೇವ ನಾಯಕ್ ಒತ್ತಾಯ

ಅಕ್ರಮ-ಸಕ್ರಮ ಸಮಿತಿ ಸಭೆ ನಡೆಸುವಂತೆ ಶಾಸಕರಿಗೆ ವಾಸುದೇವ ನಾಯಕ್ ಒತ್ತಾಯ


ಮೂಡುಬಿದಿರೆ: ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಉಮಾನಾಥ ಕೋಟ್ಯಾನ್ ಅವರು ಕಳೆದ ಕೆಲವು ವರ್ಷಗಳಿಂದ ಅಕ್ರಮ-ಸಕ್ರಮ ಮತ್ತು ಬಗರ್ ಹುಕುಂ ಸಮಿತಿ ಸಭೆಗಳನ್ನು ನಡೆಸದೆ ಇರುವುದರಿಂದಾಗಿ ಸಾವಿರಾರು ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಇದರಿಂದಾಗಿ ಬಡ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ಶಾಸಕರು ಕೂಡಲೇ ಸಭೆ ನಡೆಸಿ ಇತ್ಯಥ೯ಗೊಳಿಸಬೇಕು ಎಂದು ತಾಲೂಕು ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ವಾಸುದೇವ ನಾಯಕ್ ಅವರು  ಒತ್ತಾಯಿಸಿದ್ದಾರೆ.

ಅವರು ಸೋಮವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.  ಶಾಸಕರು ಅವರ ಅವಧಿಯಲ್ಲಿ ಕೇವಲ ಮೂರು ಸಭೆಗಳನ್ನು ಮಾತ್ರ ನಡೆಸಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಈ ಸಮಿತಿಯ ಸಭೆಯೇ ನಡೆದಿಲ್ಲ. ಪ್ರಸ್ತುತ ಫಾರಂ 50, ಫಾರಂ 53, ಮತ್ತು ಫಾರಂ 57ರ ಅಡಿಯಲ್ಲಿ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೇ ಉಳಿದುಕೊಂಡಿವೆ. ಇದರಿಂದ ಭೂಮಿ ಮಂಜೂರಾತಿಗಾಗಿ ಕಾಯುತ್ತಿರುವ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗಿದೆ," ಎಂದು  ಆತಂಕ ವ್ಯಕ್ತಪಡಿಸಿದರು.

ಬಾಕಿ ಉಳಿದಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಮಿತಿ ಸಭೆಗಳನ್ನು ತುರ್ತಾಗಿ ಕರೆಯಬೇಕು. ಬಡವರ ಭೂ ಸಮಸ್ಯೆಗಳನ್ನು ಬಗೆಹರಿಸಲು ಶಾಸಕರು ಉಮಾನಾಥ ಕೋಟ್ಯಾನ್ ಅವರು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಕರುಣಾಕರ, ಮರಿಟಾ ಮೆನೇಜಸ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article