ವಿಶೇಷ ಮಕ್ಕಳು ಮತ್ತು ಅವರ ಪೋಷಕರಿಗಾಗಿ ಕ್ರೀಡೆ ಮತ್ತು ಅರಿವು ಕಾರ್ಯಕ್ರಮ

ವಿಶೇಷ ಮಕ್ಕಳು ಮತ್ತು ಅವರ ಪೋಷಕರಿಗಾಗಿ ಕ್ರೀಡೆ ಮತ್ತು ಅರಿವು ಕಾರ್ಯಕ್ರಮ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಸಹಯೋಗದೊಂದಿಗೆ ಜ್ಯೋತಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಮಕ್ಕಳು ಮತ್ತು ಅವರ ಪೋಷಕರಿಗಾಗಿ ಕ್ರೀಡೆ ಮತ್ತು ಅರಿವು ಕಾರ್ಯಕ್ರಮ ಮಂಗಳವಾರ ನಡೆಯಿತು.

ಸಮನ್ವಯ ಅಧಿಕಾರಿ ಸೌಮ್ಯ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಸದಸ್ಯೆ ಸಂಗೀತ ಅಧ್ಯಕ್ಷತೆವಹಿಸಿದ್ದರು. 

ಸುಶೀಲ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. 

ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಖಾದರ್, ವಿಶೇಷ ಮಕ್ಕಳು ಮತ್ತು ಪೋಷಕರಿಗೆ ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯ ನಿಯಮಗಳ ಮಾಹಿತಿ ನೀಡಿದರು.

ವಿಶೇಷ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ದೈಹಿಕ ಶಿಕ್ಷಕಿ ಶಾಂತಿ ಮತ್ತು ಚಂದ್ರಿಕಾ ಕ್ರೀಡಾಕೂಟವನ್ನು ನಡೆಸಿಕೊಟ್ಟರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ವಿತರಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಆಪೋಲಿನ್ ಸ್ವಾಗತಿಸಿದರು. ಶಿಕ್ಷಕಿ ಹೇಮಾ ಕಾರ್ಯಕ್ರಮ ನಿರೂಪಿಸಿ, ಗೌರವ ಶಿಕ್ಷಕಿ ಮನಿಷಾ ವಂದಿಸಿದರು. ಬಿ.ಐ.ಆರ್.ಟಿ ಸುಶೀಲಾ ಹೆಗ್ಡೆ ಮತ್ತು ಫ್ಲೇವಿ ಕಾರ್ಯಕ್ರಮವನ್ನು ಸಂಘಟಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article