ಖೇಲೋ ಇಂಡಿಯಾ ಅಂತರ ವಿವಿ ಗೇಮ್ಸ್: ಸತತ ಮೂರನೇ ಬಾರಿಗೆ ಆಳ್ವಾಸ್ ಗೆ ಸಮಗ್ರ ಚಾಂಪಿಯನ್
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಮೂರು ಚಿನ್ನ ಮತ್ತು ಒಂದು ಕಂಚಿನ ಪದಕವನ್ನು ಗೆಲ್ಲುವ ಮೂಲಕ ಈ ಮಹತ್ವದ ಸಾಧನೆಯನ್ನು ಮಾಡಿದ್ದಾರೆ.
ಪದಕ ವಿಜೇತರು:
ಆಳ್ವಾಸ್ ಕ್ರೀಡಾಪಟುಗಳು ಈ ಕೆಳಗಿನ ವಿಭಾಗಗಳಲ್ಲಿ ಪದಕಗಳನ್ನು ಗೆದ್ದರು: ನಾಗೇಂದ್ರ: ಡಿಸ್ಕಸ್ ಥ್ರೋನಲ್ಲಿ ಚಿನ್ನ, ಅಮನ್: ಪೋಲ್ ವಾಲ್ಟ್‌ನಲ್ಲಿ ಚಿನ್ನ., ಚಮನ್: ಡೆಕಥ್ಲಾನ್‌ನಲ್ಲಿ ಚಿನ್ನ, ಪ್ರದೀಪ್ ಕುಮಾರ್: ಟ್ರಿಪಲ್ ಜಂಪ್‌ನಲ್ಲಿ ಕಂಚು ಪಡೆದರು.ಬಆಳ್ವಾಸ್ ತಂಡವು ಸಮಗ್ರ ಚಾಂಪಿಯನ್‌ಶಿಪ್ ಪಟ್ಟವನ್ನು ಅಲಂಕರಿಸಿತು.
ಮಹಿಳಾ ವಿಭಾಗದಲ್ಲಿ ನಾಲ್ಕನೇ ಸ್ಥಾನ:
ಇದೇ ಕ್ರೀಡಾಕೂಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡವು ಒಂದು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಪಡೆಯುವ ಮೂಲಕ ನಾಲ್ಕನೇ ಸ್ಥಾನ ಗಳಿಸಿತು. ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗಗಳಲ್ಲಿ ಮಂಗಳೂರು ವಿ.ವಿ. ಒಟ್ಟು 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿ ಒಟ್ಟು 7 ಪದಕಗಳನ್ನು ಗಳಿಸಿತು.
ಆಳ್ವಾಸ್ ಕೊಡುಗೆ:
ಮಂಗಳೂರು ವಿಶ್ವವಿದ್ಯಾಲಯದ ತಂಡದಲ್ಲಿ ಒಟ್ಟು 43 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 39 ವಿದ್ಯಾರ್ಥಿಗಳು ಆಳ್ವಾಸ್‌ನ ಕ್ರೀಡಾಪಟುಗಳಾಗಿದ್ದಾರೆ. ವಿವಿಯು ಪಡೆದ 7 ಪದಕಗಳಲ್ಲಿ ಒಂದು ಬೆಳ್ಳಿ ಪದಕವನ್ನು ಹೊರತುಪಡಿಸಿ, ಉಳಿದ 6 ಪದಕಗಳು ಆಳ್ವಾಸ್ ವಿದ್ಯಾರ್ಥಿಗಳ ಕೊಡುಗೆಯಾಗಿದೆ. ದಕ್ಷಿಣ ಕನ್ನಡದ ಊರು ಪ್ರಥಮ ದರ್ಜೆ ಕಾಲೇಜಿನ ಶ್ರೀ ದೇವಿ ಅವರು ಒಂದು ಬೆಳ್ಳಿ ಪದಕವನ್ನು ಪಡೆದಿದ್ದರು.
ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಅಭಿನಂದಿಸಿದ್ದಾರೆ.