ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ವಿಶ್ವ ಧ್ಯಾನ ದಿನಾಚರಣೆ
Sunday, December 21, 2025
ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು, ಕಲ್ಲಬೆಟ್ಟು ಮೂಡುಬಿದಿರೆ ಇಲ್ಲಿ ಭಾನುವಾರ ವಿಶ್ವ ಧ್ಯಾನ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಸಂಸ್ಥೆಯಲ್ಲಿ ಬೆಳಗ್ಗೆ 8 ಗಂಟೆಯಿಂದ ಸುಮಾರು ಅರ್ಧ ಗಂಟೆಗಳ ಕಾಲ ಧ್ಯಾನವನ್ನು ವಿದ್ಯಾರ್ಥಿಗಳು ಅನುಸರಿಸಿದರು.
ಡಾ . ವೃಂದಾ ಬೆಡೇಕರ್ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನವೆಂದರೆ ಮನಸ್ಸನ್ನು ಶಾಂತಗೊಳಿಸಿ, ಏಕಾಗ್ರತೆ ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಆಂತರಿಕ ಶಾಂತಿ, ಆತ್ಮಸ್ಥೈರ್ಯ ಮತ್ತು ಮಾನಸಿಕ ಸಮತೋಲನವನ್ನು ಪಡೆಯಲು ಸಹಾಯಕ ವಾಗುತ್ತದೆ. ಧ್ಯಾನವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಧ್ಯಾನದ ಮಹತ್ವವನ್ನು ತಿಳಿ ಹೇಳಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟಿಗಳಾದ ಮಹಮ್ಮದ್ ಭಾಷಾ, ಚಂದ್ರಶೇಖರ್ ರಾಜೇ ಅರಸ್, ಯೋಗೇಶ್ ಬೆಡೇಕರ್,ಸುಭಾಶ್ ಝಾ,ಡಾ. ಎಸ್ ಎನ್ ವೆಂಕಟೇಶ್ ನಾಯಕ್, ಡಾ. ಶರತ್ ಗೋರೆ ಉಪಸ್ಥಿತರಿದ್ದರು.
