ನೆತ್ತೋಡಿ: ನದಿಯಲ್ಲಿ ಯುವಕನ ಮೃತದೇಹ ಪತ್ತೆ

ನೆತ್ತೋಡಿ: ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಮೂಡುಬಿದಿರೆ: ಹೊಸಂಗಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಸಂಜೆ ಪತ್ತೆಯಾಗಿದೆ.

ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ್ ಪೂಜಾರಿ (42) ಎಂಬಾತ ಆತ್ಮಹತ್ಯೆ ಮಾಡಿಕೊಂಡವರು.

ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ.

ವಿದೇಶದಲ್ಲಿದ್ದ ಈತ ಇತ್ತೀಚೆಗಷ್ಟೇ ಊರಿಗೆ ಬಂದಿದ್ದು,ಅಲ್ಲಿಂದ ಹೊಸಂಗಡಿಯಲ್ಲಿರುವ ಹೆಂಡತಿ ಮನೆಗೆ ಬಂದಿದ್ದರೆನ್ನಲಾಗಿದೆ.

ಭಾನುವಾರ ಅದ್ಯಾವುದೋ ವಿಷಯಕ್ಕೆ ಜಗಳ ನಡೆದಿತ್ತೆನ್ನಲಾಗಿದ್ದು ಮಿಯ್ಯಾರಿನಲ್ಲಿರುವ ತನ್ನ ಅಣ್ಣನ ಮೊಬೈಲ್ ಗೆ ಮೆಸೇಜ್ ಮಾಡಿ ಈ ಬಗ್ಗೆ ಹೇಳಿಕೊಂಡಿದ್ದು,ಅವರು ‘ಸರಿಮಾಡುವ,ಆತುರದ ನಿರ್ಧಾರ ಬೇಡ’ಎಂದು ಬುದ್ಧಿಮಾತು ಹೇಳಿದ್ದರೆನ್ನಲಾಗಿದೆ. ಆದರೆ ಆತ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೇರವಾಗಿ ನದಿ ಬಳಿ ಹೋಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

 ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ಧಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article