ಸಂಗೀತ ಮತ್ತು ಸಾಹಿತ್ಯ ಕಾಯ೯ಕ್ರಮಗಳು ಸಂಸ್ಕಾರವನ್ನು ಬೆಳೆಸುತ್ತದೆ: ಎಕ್ಸಲೆಂಟ್ ಸಂಗೀತ ಸಂಜೆಯಲ್ಲಿ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್
ಅವರು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ನಡೆದ 'ತೊರೆದು ಜೀವಿಸಬಹುದೇ..' ಎಕ್ಸಲೆಂಟ್ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ವೇದಿಕೆಯಾಗಬೇಕು. ಈ ದೃಷ್ಟಿಯಿಂದ ಕಾಲೇಜುಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುವುದು ವಿದ್ಯಾರ್ಥಿಗಳಿಗೆ ಅನೇಕ ರೀತಿಯ ಲಾಭಗಳನ್ನು ನೀಡುತ್ತದೆ.
ಸಂಗೀತವು ಮನಸ್ಸಿಗೆ ಶಾಂತಿ ಮತ್ತು ಉಲ್ಲಾಸವನ್ನು ನೀಡುತ್ತದೆ. ನಿರಂತರ ಪಾಠ, ಪರೀಕ್ಷಾ ಒತ್ತಡ ಮತ್ತು ಸ್ಪರ್ಧಾತ್ಮಕ ವಾತಾವರಣದಲ್ಲಿರುವ ವಿದ್ಯಾರ್ಥಿಗಳಿಗೆ ಸಂಗೀತ ಕಾರ್ಯಕ್ರಮಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತವೆ.
ಶಾಸ್ತ್ರೀಯ, ಸುಗಮ, ಜನಪದ ಅಥವಾ ಭಾವಗೀತೆಗಳಂತಹ ವಿವಿಧ ಸಂಗೀತ ಶೈಲಿಗಳ ಪರಿಚಯದಿಂದ ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಮೇಲಿನ ಗೌರವ ಹೆಚ್ಚುತ್ತದೆ ಎಂದರು.
ವೇದಿಕೆಯಲ್ಲಿ ಉದ್ಯಮಿ ಶ್ರೀಪತಿ ಭಟ್, ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಎಕ್ಸಲೆಂಟ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಸಂಪತ್ ಕುಮಾರ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಸಿಬಿಎಸ್‌ಸಿ ಪ್ರಾಂಶುಪಾಲರಾದ ಶ್ರೀ ಪ್ರಸಾದ್ ಉಪಸ್ಥಿತರಿದ್ದರು.
ಉಪನ್ಯಾಸಕ ಡಾ. ವಾದಿರಾಜ ಕಲ್ಲುರಾಯ ಕಾಯ೯ಕ್ರಮ ನಿರೂಪಿಸಿದರು.
