ಬಜ್ಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅಧಿಕ ಸ್ಥಾನಗಳನ್ನು ಗಳಿಸಿದ ಬಿಜೆಪಿ
Wednesday, December 24, 2025
ಮೂಡುಬಿದಿರೆ: ಬಜ್ಪೆ ಪಟ್ಟಣ ಪಂಚಾಯತ್ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯ ಫಲಿತಾಂಶವು ಬುಧವಾರ ಹೊರಬಿದಿದ್ದು ಎರಡೂ ಪಟ್ಟಣ ಪಂಚಾಯತ್ ಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿರುವ ಬಿಜೆಪಿಯು ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧಗೊಂಡಿದೆ.
ಬಜ್ಪೆ ಪಟ್ಟಣ ಪಂಚಾಯತ್ ನಲ್ಲಿ 19 ಸ್ಥಾನಗಳನ್ನು ಹೊಂದಿದ್ದು ಬಿಜೆಪಿ 11, ಕಾಂಗ್ರೆಸ್ 4, ಎಸ್.ಡಿ.ಪಿ.ಐ 3 ಹಾಗೂ ಓವ೯ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ.
ಕಿನ್ನಿಗೋಳಿ ಪಟ್ಟಣ ಪಂಚಾಯತ್ 18 ಸ್ಥಾನಗಳನ್ನು ಹೊಂದಿದ್ದು ಬಿಜೆಪಿ 10 ಹಾಗೂ ಕಾಂಗ್ರೆಸ್ 8 ಸ್ಥಾನಗಳಲ್ಲಿ ಜಯಗಳಿಸಿದೆ.
ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಅಭಿವೃದ್ಧಿ ಕಾಯ೯ಗಳು ಹಾಗೂ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ಅವರು ಕಾಯ೯ಕತ೯ರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಡೆಸಿದ ಫೀಲ್ಡ್ ವಕ್೯ನಿಂದಾಗಿ
ಬಿಜೆಪಿ ನಿರೀಕ್ಷಿಸಿದಂತೆಯೇ ಫಲಿತಾಂಶವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.