ಮೂಡುಬಿದಿರೆ ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ

ಮೂಡುಬಿದಿರೆ ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ


ಮೂಡುಬಿದಿರೆ: ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬವನ್ನು ಗಿಡವನ್ನು ನೆಡುವ ಮೂಲಕ ಆಚರಿಸಬೇಕು ಎಂದು ಉಪ ವಲಯಾರಣ್ಯಾಧಿಕಾರಿ ಗುರುಮೂರ್ತಿ ಹೇಳಿದರು.  

ಅವರು ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಉದ್ಯಮಿ ಶೈಲೇಂದ್ರ ಕುಮಾರ್ ಜೈನ್ ಮಾತನಾಡಿ ಶಾಲಾ ಶಿಸ್ತು, ಪರಿಸರ ಮತ್ತು ಸಂಸ್ಕೃತಿಯ ಕುರಿತು ಪ್ರಶಂಸೆಯನ್ನು ವ್ಯಕ್ತಪಡಿಸಿ ಸ್ವಯಂ ನಂಬಿಕೆ, ಅವಕಾಶಗಳ ಸದುಪಯೋಗ ಸಾಧನೆಗೆ ದಾರಿ ಎಂದು  ಅಭಿಪ್ರಾಯಪಟ್ಟರು.

ಸಂಸ್ಥೆಯ ಕಾರ್ಯದರ್ಶಿ  ರಶ್ಮಿತಾ ಜೈನ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಹಿರಿಯರಿಗೆ ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ಬೆಳೆಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಗುರುಮೂರ್ತಿ ಮತ್ತು ಶೈಲೇಂದ್ರ ಕುಮಾರ್ ಜೈನ್ ನವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 

ವಿವಿಧ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಅತಿಥಿಗಳು ವಿತರಿಸಿದರು. 

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಬಿ.ಪಿ ಸಂಪತ್ ಕುಮಾರ್,  ಪ್ರಸಾದ್ ಉಪಸ್ಥಿತರಿದ್ದರು.

ಸಿ.ಬಿ.ಎಸ್.ಇ ಶಾಲೆಯ ಪ್ರಾಂಶುಪಾಲ ಪ್ರಸಾದ್ ಸ್ವಾಗತಿಸಿದರು. ಶಿಕ್ಷಕಿ ಸ್ವಾತಿ ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article