ಸಾಂಸ್ಕೃತಿಕ ಸ್ಪರ್ಧೆ: ಸಂತ ಫಿಲೋಮಿನಾ ಪ.ಪೂ ಕಾಲೇಜಿನ ನಿಶಾ ಪಿ.ಎಸ್. ರಾಜ್ಯಮಟ್ಟಕ್ಕೆ ಆಯ್ಕೆ

ಸಾಂಸ್ಕೃತಿಕ ಸ್ಪರ್ಧೆ: ಸಂತ ಫಿಲೋಮಿನಾ ಪ.ಪೂ ಕಾಲೇಜಿನ ನಿಶಾ ಪಿ.ಎಸ್. ರಾಜ್ಯಮಟ್ಟಕ್ಕೆ ಆಯ್ಕೆ


ಪುತ್ತೂರು: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಉಡುಪಿ ಜಿಲ್ಲೆ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು 2025-26 ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ನಿಶಾ ಪಿ.ಎಸ್. ದ್ವಿತೀಯ ಸ್ಥಾನ ಪಡೆದುಕೊಂಡು ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಿಕ್ಷಕರಾದ ರಮೇಶ್ ಶಿರ್ಲಾಲ್ ತರಬೇತಿ ನೀಡಿರುತ್ತಾರೆ.

ಸುಳ್ಯದ ಪೈಚಾರು ನಿವಾಸಿ ಸುಕುಮಾರ ಪಿ.ಆರ್. ಮತ್ತು ಪುಷ್ಪ ದಂಪತಿಗಳ ಪುತ್ರಿ.

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article