ಸ್ವದೇಶಿ ವಸ್ತುಗಳ ಬಳಕೆಗೆ ಸಂಕಲ್ಪ: ಸ್ವದೇಶಿ ಜಾಗರಣಾ ಸೈಕ್ಲಿಂಗ್ ಜಾಥಾ
ಸುಳ್ಯ ಮಾರ್ಗವಾಗಿ ಪುತ್ತೂರಿಗೆ ಆಗಮಿಸಿದ ಅವರನ್ನು ದರ್ಬೆ ವಿನಾಯಕ ನಗರದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳು ಮತ್ತು ಪುತ್ತೂರಿನ ನಾಗರಿಕರು ಆರತಿ ಬೆಳಗಿ ಭವ್ಯ ಸ್ವಾಗತ ನೀಡಲಾಯಿತು. ಬಳಿಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಭಾರತ ಮಾತೆಗೆ ಪುಷ್ಪಾರ್ಚಣೆ ಮಾಡಿ ಜಾಥಾಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಪ್ರಭಾಕರ ಭಟ್ ಅವರು, ನನ್ನ ದೇಶ ಎಂಬ ಸ್ವಾಭಿಮಾನದಿಂದ ಪ್ರತಿಯೊಬ್ಬರೂ ಸ್ವದೇಶಿ ವಸ್ತುಗಳ ಬಳಕೆ ಮಾಡಬೇಕು. ಯಾವುದೇ ಜಾಹಿರಾತುಗಳಿರಲಿ, ಯಾರು ಏನೇ ಹೇಳಲಿ, ನಾನು ನನ್ನ ದೇಶದ ವಸ್ತುಗಳನ್ನೇ ಬಳಕೆ ಮಾಡುತ್ತೇನೆ ಎಂಬ ಸಂಕಲ್ಪ ಮಾಡುವ ಮೂಲಕ ಬದಲಾವಣೆ ತರಬೇಕು ಎಂದರು.
ದರ್ಬೆ ವಿನಾಯಕ ನಗರದಿಂದ ಹೊರಟ ಸೈಕಲ್ ಜಾಥಾವು ಪುತ್ತೂರು ಮುಖ್ಯರಸ್ತೆಯಾಗಿ ನೆಹರುನಗರ ವಿವೇಕಾನಂದ ಕಾಲೇಜು ಅವರಣದ ತನಕ ಸೈಕಲ್ ಜಾಥಾ ನಡೆಯಿತು. ಸುಮಾರು 5 ಕಿ.ಮೀ ದೂರದ ಜಾಥಾದಲ್ಲಿ ಮಾಜಿ ಸೈನಿಕರು, ಬ್ಯಾಂಕ್ ಉದ್ಯೋಗಿಗಳು, ವಿಜ್ಞಾನಿಗಳು, ಎಂಜಿನಿಯರ್‌ಗಳು, ವೈದ್ಯರು, ವಿವೇಕಾನಂದ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಪುತ್ತೂರಿನ ನಾಗರಿಕರು ಸೇರಿದಂತೆ ನೂರಾರು ಮಂದಿ ಜಾಥಾದಲ್ಲಿ ಭಾಗವಹಿಸಿದರು.
ಪ್ರಭಾಕರ ಭಟ್-ಕಾರ್ಣಿಕ್ ಸೈಕಲ್ ಸವಾರಿ:
ಜಾಥಾಕ್ಕೆ ಚಾಲನೆ ನೀಡಿದ ಬಳಿಕ ಪ್ರಭಾಕರ ಭಟ್, ವಿಧಾನ ಪರಿಷತ್ ಸದಸ್ಯ ಕ್ಯಾ,ಗಣೇಶ್ ಕಾರ್ಣಿಕ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಸೈಕಲ್ ಏರಿ ತಾವೇ ಸೈಕಲ್ ಸವಾರಿ ಮಾಡುವ ಮೂಲಕ ಜಾಥಾದಲ್ಲಿ ಸಾಗಿದರು.
ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಉಪಾಧ್ಯಕ್ಷರಾದ ವಿದ್ಯಾಧರ ಜೈನ್, ಹರಿಪ್ರಸಾದ್ ಯಾದವ್, ಮಾಜಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಕಾರ್ಯದರ್ಶಿ ಮಣಿಕಂಠ, ತಾ.ಪಂ ಮಾಜಿ ಸದಸ್ಯರಾದ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಹರೀಶ್ ಬಿಜತ್ರೆ, ಪ್ರಮುಖರಾದ ವಿವೇಕಾನಂದ ಶಿಶುಮಂದಿರದ ಅಧ್ಯಕ್ಷ ರಾಜಗೋಪಾಲ ಭಟ್, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ರವೀಂದ್ರ ಪಿ., ಪ್ರಾಂಶುಪಾಲ ದೇವಿಚರಣ್ ರೈ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯಗುರು ಸತೀಶ್ ರೈ, ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕಾಂತ್ ಕೊಳತ್ತಾಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಸಂತ ಕುಮಾರ್, ರಮೇಶ್ ಪ್ರಭು, ಚಂದ್ರಶೇಖರ ಮೂಡಾಯೂರು ಸೇರಿದಂತೆ ಹಲವು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸೈಕಲ್ ಜಾಥಾ ವಿವೇಕಾನಂದ ಕಾಲೇಜು ತಲುಪಿದ ಬಳಿಕ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ, ಜಾಥಾದಲ್ಲಿ ಭಾಗವಹಿಸುತ್ತಿರುವ ತಂಡದ ಜೊತೆ ವಿಶೇಷ ಸಂವಾದ ನಡೆಯಿತು.