ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಶಸ್ತಿ
Sunday, December 7, 2025
ಪುತ್ತೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಅಂತರ್ ಕಾಲೇಜು ಫೋಟೋಗ್ರಫಿ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಮತದಾನದ ಜಾಗೃತಿಯ ಕುರಿತಾಗಿ ವಿದ್ಯಾರ್ಥಿಗಳು ಸೃಜನಶೀಲತೆಯಿಂದ ರೂಪಿಸಿದ ಫೋಟೋಗ್ರಫಿಗಳಿಗೆ ಪ್ರಶಸ್ತಿಯ ಸನ್ಮಾನ ದೊರೆತಿದೆ. ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಹಿರಿಮೆಯನ್ನು ಸಾರುವ ಸಂದೇಶವನ್ನು ವಿದ್ಯಾರ್ಥಿಗಳು ವಿನೂತನವಾಗಿ ಪ್ರಸ್ತುತಪಡಿಸಿದರು.
ವಿಶಾಖ್ III ಬಿ.ಸಿ.ಎ. ಪ್ರಥಮ ಮತ್ತು ಯೂಸಫ್ ಆಲಿ ಸಲೀಂ III ಬಿ.ಸಿ.ಎ. ದ್ವಿತೀಯ ಬಹುಮಾನವನ್ನು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು. ನವೆಂಬರ್ 26 ರಂದು ಪುತ್ತೂರು ಪುರಭವನದಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಮತ್ತು ಸನ್ಮಾನ ಪತ್ರದೊಂದಿಗೆ ಗೌರವಿಸಲಾಯಿತು. ಪ್ರಾಂಶುಪಾಲರಾದ ರೆ. ಡಾ. ಆಂಟೊನಿ ಪ್ರಕಾಶ್ ಮೊಂತೇರೋರವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಧಾಕೃಷ್ಣ ಗೌಡ ವಿ., ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ. ಭಾರತಿ ರೈ ಮತ್ತು ಯಕ್ಷಕಲಾ ಕೇಂದ್ರ ನಿರ್ದೇಶಕ ಪ್ರಶಾಂತ್ ರೈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
